ಬೆಂಗಳೂರು: ಶಾಲಾ ಪಠ್ಯಪುಸ್ತಕದಲ್ಲಿ ಮಲೆಯಾಳಿ ಚಿತ್ರ ನಟ ಕುಂಚಾಕೋ ಬಾಬನ್ ಅವರ ಚಿತ್ರವನ್ನು ಅಂಚೆಯಣ್ಣನ ಶೀರ್ಷಿಕೆ ಜತೆ ಪ್ರಕಟಿಸಿದ ಸರ್ಕಾರದ ನಡೆಯನ್ನು ಕಾಂಗ್ರೆಸ್ ಸಂಸದ ಡಿ.ಕೆ. ಸುರೇಶ್ ಟೀಕಿಸಿದ್ದಾರೆ.
ಬಾಬನ್ ಮಾಡಿರುವ ಟ್ವೀಟ್ ಅನ್ನು ಮರು ಟ್ವೀಟ್ ಮಾಡಿರುವ ಸುರೇಶ್, ‘ಪಠ್ಯಪುಸ್ತಕ ಸಂಘವು ಯಾವುದೇ ಪರಿಶೀಲನೆ ನಡೆಸದೇ ಅಂತರ್ಜಾಲದಿಂದ ಚಿತ್ರ ಗಳನ್ನು ತೆಗೆದು ಪ್ರಕಟಿಸುತ್ತಿದೆ. ಬಿಜೆಪಿ ಆಡಳಿತದ ಅವಧಿಯಲ್ಲಿ ಶಿಕ್ಷಣದ ಗುಣ ಮಟ್ಟ ಕುಸಿಯುತ್ತಿರುವುದಕ್ಕೆ ಇದಕ್ಕಿಂತ ಸಾಕ್ಷಿಬೇಕೇ’ಎಂದು ಪ್ರಶ್ನಿಸಿದ್ದಾರೆ. ‘ಶಾಲಾ ಪಠ್ಯಕ್ರಮದಲ್ಲಿರುವ ಚಿತ್ರ ಗಳು ಮತ್ತು ಪಠ್ಯಗಳನ್ನು ಗಮನಿಸಿ ದರೆ ಪುಸ್ತಕಗಳನ್ನು ಶಿಕ್ಷಣ ಇಲಾಖೆಯ ಮೇಲುಸ್ತುವಾರಿಯಲ್ಲಿ ಸಿದ್ಧಪಡಿಸಲಾ ಗುತ್ತಿದೆಯೇ ಅಥವಾ ಕೇಶವಕೃಪದಲ್ಲೋ ಎಂಬುದನ್ನು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹಾಗೂ ಹಿಂದಿನ ಸಚಿವ ಎಸ್. ಸುರೇಶ್‌ಕುಮಾರ್ ಸ್ಪಷ್ಟಪಡಿಸಬೇಕು’ ಎಂದು ಆಗ್ರಹಿಸಿದ್ದಾರೆ.