ನವದೆಹಲಿ: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಬಗ್ಗೆ ಚರ್ಚೆ ನಡೆಸಬೇಕು ಎಂದು ಲೋಕಸಭೆಯಲ್ಲಿ ವಿಪಕ್ಷ ನಾಯಕ ರಾಹುಲ್ ಗಾಂಧಿ ಮಾತನಾಡುತ್ತಿದ್ದ ವೇಳೆಯೇ ಮೈಕ್ ಆದ ಘಟನೆ ನಡೆದಿದೆ.
ಈ ಮಧ್ಯೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರ ಮೈಕ್ ಸ್ವಿಚ್ ಆಫ್ ಆಗಿರುವುದಾಗಿ ಕಾಂಗ್ರೆಸ್ ಆರೋಪಿಸಿದೆ. ಮೈಕ್ ಆಫ್ ಆದ ನಂತರ ಗದ್ದಲ ಉಂಟಾಯಿತು ಎಂದು ಕಾಂಗ್ರೆಸ್ ಸಂಸದ ದೀಪೇಂದರ್ ಹೂಡಾ ಹೇಳಿದ್ದಾರೆ.
ನೀಟ್ ವಿವಾದದ ಬಗ್ಗೆ ಚರ್ಚೆ ಒತ್ತಾಯಿಸಿದ್ದ ‘INDIA’ ಮೈತ್ರಿಕೂಟ ಹಾಗೂ NDA ಒಕ್ಕೂಟದ ಸಂಸದರ ನಡುವೆ ಪರಸ್ಪರ ವಾಗ್ವಾದ ನಡೆದಿದೆ. ಈ ಗದ್ದಲದ ನಡುವೆ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಸದನವನ್ನು ಸೋಮವಾರಕ್ಕೆ ಮುಂದೂಡಿದ್ದಾರೆ.