ಕನ್ನಡ ಪರೀಕ್ಷಾ ಪ್ರಾಧಿಕಾರದ ದುಷ್ಕೃತ್ಯ; ಸಿಎಂ ಗೆ ಸಿದ್ದರಾಮಯ್ಯ ಪತ್ರ

Prasthutha|

ಬೆಂಗಳೂರು: ಇತ್ತೀಚೆಗೆ ನಡೆದ ಕನ್ನಡ ಸಹಾಯಕ ಪ್ರಾಧ್ಯಾಪಕ ಹುದ್ದೆಯ ಪರೀಕ್ಷೆಯಲ್ಲಿ ಸಾಕಷ್ಟು ಲೋಪದೋಷಗಳು ಕಂಡುಬಂದಿವೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದಾರೆ.

- Advertisement -

ಐಚ್ಛಿಕ ಕನ್ನಡ ಪ್ರಶ್ನೆ ಪತ್ರಿಕೆಯಲ್ಲಿ ಕನ್ನಡದಲ್ಲಿ ಮುದ್ರಿತವಾಗಿರುವ ಪ್ರಶ್ನೆಗಳ ಬಗ್ಗೆ ಏನಾದರೂ ವ್ಯತ್ಯಾಸ ಕಂಡುಬಂದಲ್ಲಿ ಇಂಗ್ಲೀಷ್‌ ಆವೃತ್ತಿಯನ್ನು ಅಂತಿಮವಾಗಿ ಪರಿಗಣಿಸಲಾಗುವುದು ಎಂಬ ಸೂಚನೆ ನೀಡಲಾಗಿದೆ. ಐಚ್ಛಿಕ ಕನ್ನಡಕ್ಕೆ ಇಂಗ್ಲೀಷ್‌ ಅನಿವಾರ್ಯತೆ ಇದೆಯಾ ಎಂದು ಪ್ರಶ್ನಿಸಿದ್ದಾರೆ.

ಸಮ್ಮುಖ ಕೃತಿಯನ್ನು ಸರ್ಮುಖವೆಂದು, ಕರಪಾಲ ಮೇಳ ಕೃತಿಯನ್ನು ಕರಪಾಲದವರು ಎಂಬ ಅನೇಕ ದೋಷಗಳು ಕಾಣಬಹುದು. ಕಾಗುಣಿತ ದೋಷಗಳಿರುವುದರಿಂದ ಹೇಳಿಕೆ-ವಿವರಣೆ ಪ್ರಶ್ನೆಗಳಿಗೆ ಉತ್ತರಿಸುವುದಕ್ಕೆ ಸಾಧ್ಯವಾಗಿಲ್ಲವೆಂದು ಅಭ್ಯರ್ಥಿಗಳು ಅಳಲು ತೋಡಿಕೊಂಡಿದ್ದಾರೆ.

- Advertisement -

ರಾಜ್ಯ ಸರಕಾರದ ಹುದ್ದೆಗಳಲ್ಲಿನ ನೇಮಕಾತಿಯಲ್ಲಿ ವ್ಯಾಪಕ ಭ್ರಷ್ಟಾಚಾರಗಳು ನಡೆಯುತ್ತಿದ್ದು, ಕನ್ನಡ ಪರೀಕ್ಷಾ ಪ್ರಾಧಿಕಾರ ಮಾಡಿರುವ ಈ ದುಷ್ಕೃತ್ಯ ಮತ್ತು ಲೋಪಗಳ ಕುರಿತು ಸಮರ್ಪಕ ತನಿಖೆ ಮಾಡಬೇಕು. ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು. ಜತೆಗೆ ಮರುಪರೀಕ್ಷೆ ನಡೆಸಿ ಅರ್ಹರನ್ನು ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.



Join Whatsapp