ಲಸಿಕಾ ಅಭಿಯಾನದ ಖರ್ಚು ನಿಭಾಯಿಸಲು ಸಾಲದ ಮೊರೆ ಹೋದ ಮೋದಿ ಸರಕಾರ

Prasthutha|

ನವದೆಹಲಿ: ದೇಶದಲ್ಲಿ ನಡೆದ ಲಸಿಕಾ ಅಭಿಯಾನದ ಖರ್ಚನ್ನು ನಿಭಾಯಿಸಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಅಂತರಾಷ್ಟ್ರೀಯ ಬ್ಯಾಂಕುಗಳಿಂದ ಸಾಲ ಪಡೆಯಲು ಮುಂದಾಗಿದೆ. 500 ಮಿಲಿಯನ್ ಡಾಲರ್ ಮೊತ್ತದ ಸಾಲವನ್ನು ಏಷಿಯನ್ ಇನ್ಫ್ರಾಸ್ಟ್ರಕ್ಚರ್ ಇನ್ವೆಸ್ಟ್ಮೆಂಟ್ ಬ್ಯಾಂಕಿನಿಂದ ‘ಸುರಕ್ಷಿತ ಹಾಗೂ ಪರಿಣಾಮಕಾರಿ ಕೋವಿಡ್ ಲಸಿಕೆ’ ಪಡೆಯಲು ತಯಾರಿ ನಡೆಸಿದೆ.

- Advertisement -


ಅಲ್ಲದೇ ಭಾರತವು ನಾಲ್ಕು ಮಿಲಿಯನ್ ಡಾಲರ್ ಸಾಲವನ್ನು ಏಷಿಯಾ ಪೆಸಿಫಿಕ್ ವ್ಯಾಕ್ಸಿನ್ ಆ್ಯಕ್ಸೆಸ್ ಫೆಸಿಲಿಟಿ ಪ್ರೋಗ್ರಾಂ (Asia Pacific Vaccine Access Facility programme) ಅಡಿಯಲ್ಲಿ ಪಡೆಯಲಿದೆ. ಲಸಿಕಾ ಕೇಂದ್ರಗಳ ಅಭಿವೃದ್ದಿ ಹಾಗೂ ವೈದ್ಯಕೀಯ ತ್ಯಾಜ್ಯ ನಿರ್ವಹಣೆಗೆ ಈ ಸಾಲದ ಮೊತ್ತವನ್ನು ಬಳಸಲಾಗುವುದು ಎಂದು ವರದಿ ತಿಳಿಸಿದೆ.

ಭಾರತ ಸರಕಾರ ಲಸಿಕೆಗಾಗಿ ಮಾಡಿರುವ ಸಾಲ ಇಷ್ಟೇ ಅಲ್ಲ, ಈ ಮೊದಲು ಏಷಿಯನ್ ಡೆವೆಲಪ್ಮೆಂಟ್ ಬ್ಯಾಂಕಿನಿಂದ ಲಸಿಕೆ ಖರೀದಿಗಾಗಿ 1.5 ಬಿಲಿಯನ್ ಡಾಲರ್ ಮೊತ್ತದ ಹಣ, ಸಾಲದ ರೂಪದಲ್ಲಿ ಭಾರತಕ್ಕೆ ಸಿಗಲಿದೆ. 670 ಮಿಲಿಯನ್ ಡೋಸ್ ಲಸಿಕೆ ಖರೀದಿಸಲು ಏಷಿಯನ್ ಇನ್ಫ್ರಾಸ್ಟ್ರಕ್ಚರ್ ಇನ್ವೆಸ್ಟ್ಮೆಂಟ್ ಬ್ಯಾಂಕಿನಿಂದ ಸಾಲ ಪಡೆಯಲಾಗುತ್ತಿದೆ ಎಂದು ವರದಿಯಾಗಿದೆ.



Join Whatsapp