ಜಮ್ಮು-ಕಾಶ್ಮೀರದ ನಾಲ್ವರು ಮಾಜಿ ಮುಖ್ಯಮಂತ್ರಿಗಳಿಗಿದ್ದ ವಿಶೇಷ ಭದ್ರತೆ ಹಿಂಪಡೆದ ಮೋದಿ ಸರ್ಕಾರ

Prasthutha: January 6, 2022

ಸೇಡಿನ ಕ್ರಮ ಎಂದ ಮುಖಂಡರು

ಶ್ರೀನಗರ: ನ್ಯಾಷನಲ್ ಕಾನ್ಫರೆನ್ಸ್ನ ಫಾರೂಖ್ ಅಬ್ದುಲ್ಲಾ, ಅವರ ಪುತ್ರ ಹಾಗೂ ಪಕ್ಷದ ಉಪಾಧ್ಯಕ್ಷ ಉಮರ್ ಅಬ್ದುಲ್ಲಾ, ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಹಾಗೂ ಕಾಂಗ್ರೆಸ್ ನ ಹಿರಿಯ ನಾಯಕ ಗುಲಾಂ ನಬಿ ಅಜಾದ್ ಅವರಿಗೆ ನೀಡಲಾಗಿದ್ದ ಎಸ್ ಎಸ್ ಜಿ ವಿಶೇಷ ಭದ್ರತೆಯನ್ನು ಹಿಂಪಡೆಯಲಾಗಿದೆ.

ಗುರುವಾರ ನಡೆದ ಭದ್ರತಾ ಪರಿಶೀಲನೆ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ. ಈ ವರೆಗೆ ಅವರಿಗೆ ವಿಶೇಷ ಭದ್ರತಾ ಪಡೆ (ಎಸ್ ಎಸ್ ಜಿ) ಭದ್ರತೆ ನೀಡುತ್ತಿತ್ತು. ಸರ್ಕಾರದ ಈ ನಿರ್ಧಾರದಿಂದ ಅವರಿದ್ದ ಈ ವಿಶೇಷ ಭದ್ರತೆ ಇನ್ನು ರದ್ದಾಗಲಿದೆ.

ವಿಶೇಷ ಭದ್ರತಾ ಪಡೆಯು ಜಮ್ಮು ಕಾಶ್ಮೀರದ ಮುಖ್ಯಮಂತ್ರಿಗಳು ಹಾಗೂ ಮಾಜಿ ಮುಖ್ಯಮಂತ್ರಿಗಳಿಗೆ ಭದ್ರತೆ ಒದಗಿಸುವ ಕೆಲಸ ಮಾಡುತ್ತಿದೆ.

ಭದ್ರತೆಯನ್ನು ಹಿಂಪಡೆಯುವ ಕೇಂದ್ರ ಸರ್ಕಾರದ ಈ ನಿರ್ಧಾರಕ್ಕೆ ಮಾಜಿ ಮುಖ್ಯಮಂತ್ರಿಗಳು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಇದು ಮೋದಿ ಸರ್ಕಾರದ ಸೇಡಿಕ ಕ್ರಮ ಎಂದು ಟೀಕಿಸಿದೆ.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ

error: Content is protected !!