Home ಟಾಪ್ ಸುದ್ದಿಗಳು ಗೃಹಲಕ್ಷ್ಮೀ ಹಣದಿಂದ ವಿದ್ಯಾರ್ಥಿಗಳಿಗೆ ಗ್ರಂಥಾಲಯ ಕಟ್ಟಿಸಿದ ಮಹಿಳೆ!

ಗೃಹಲಕ್ಷ್ಮೀ ಹಣದಿಂದ ವಿದ್ಯಾರ್ಥಿಗಳಿಗೆ ಗ್ರಂಥಾಲಯ ಕಟ್ಟಿಸಿದ ಮಹಿಳೆ!

ಬೆಳಗಾವಿ: ಕಾಂಗ್ರೆಸ್​​ನ ಪಂಚ ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಮೂಲಕ ಮಹಿಳೆಯರ ಖಾತೆಗೆ ಪ್ರತಿ ತಿಂಗಳು 2 ಸಾವಿರ ರೂಪಾಯಿಗಳನ್ನ ಹಾಕಲಾಗುತ್ತಿದೆ.

ಈ ಹಣದಿಂದ ಎಷ್ಟೋ ಮಹಿಳೆಯರು ತಮ್ಮ ಚಿಕ್ಕ ಚಿಕ್ಕ ಆಸೆಗಳನ್ನು ಪೂರೈಸಿಕೊಳ್ಳುತ್ತಿದ್ದಾರೆ. ಇದಕ್ಕೆ ಉದಾಹರಣೆ ಎಂಬಂತೆ ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಕೌಜಲಗಿ ಗ್ರಾಮದ ಬಾಗವ್ವಾ ಸಣ್ಣಕ್ಕಿ ಎಂಬ ಮಹಿಳೆ, ತನ್ನ ಗೃಹಲಕ್ಷ್ಮಿ ಹಣದಿಂದ ಮಗನಿಗೆ ಬೈಕ್ ಕೂಡಿಸಿದ್ದರು. ಅಷ್ಟೇ ಅಲ್ಲ, ವಿಜಯಪುರ ಜಿಲ್ಲೆಯ ಆಲಮೇಲ ತಾಲೂಕಿನ ಹೂವಿನಹಳ್ಳಿಯ ಮಹಿಳೆ ಭಾಗಮ್ಮ ಎಂಬುವವರು ದೇವಿಗೆ 250 ಗ್ರಾಂ ತೂಕದ ಬೆಳ್ಳಿ ಕಿರೀಟ ನೀಡಿದ್ದಾರೆ.

ಹೀಗೆ ಸರ್ಕಾರ ಹಾಕುವ 2 ಸಾವಿರ ಹಣವನ್ನು ಕೂಡಿಟ್ಟು, ಫ್ರಿಡ್ಜ್, ವಾಷಿಂಗ್​ ಮಷಿನ್​​, ಮಕ್ಕಳಿಗೆ ಬೈಕ್​ ಸೇರಿದಂತೆ ಹಲವು ಆಸೆಗಳನ್ನು ಈಡೇರಿಸಿಕೊಳ್ಳುತ್ತಿರುವುದನ್ನು ನೋಡುತ್ತಿದ್ದೇವೆ.

ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಮಂಟೂರ ಗ್ರಾಮದ ಮಹಿಳೆ ಮಲ್ಲವ್ವ ಭೀಮಪ್ಪ ಮೇಟಿ ಎಂಬುವವರು ತಮ್ಮ ಗೃಹಲಕ್ಷ್ಮಿ ಹಣವನ್ನು ಕೂಡಿಟ್ಟು ಗ್ರಂಥಾಲಯ ತೆರೆದಿದ್ದಾರೆ.

ಗ್ರಾಮ ಪಂಚಾಯತ್ ಸದಸ್ಯರಾಗಿರುವ ಅವರು, ಮಕ್ಕಳ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅನುಕೂಲವಾಗಲೆಂದು ತಮ್ಮ ಹದಿಮೂರು ಕಂತಿನ ಗೃಹಲಕ್ಷ್ಮೀ ಹಣ ಹಾಗೂ ಪಂಚಾಯ್ತಿ ಸದಸ್ಯತ್ವದ ಗೌರವಧನವನ್ನು ಸೇರಿಸಿ ಮಕ್ಕಳ ಸಹಕಾರದಿಂದ ಒಂದು ಲಕ್ಷ ಐವತ್ತು ಸಾವಿರ ರೂ. ಖರ್ಚು ಮಾಡಿ ಸಣ್ಣ ಪ್ರಮಾಣದ ಗ್ರಂಥಾಲಯವನ್ನು ನಿರ್ಮಿಸಿ ಮಾದರಿಯಾಗಿದ್ದಾರೆ.

Join Whatsapp
Exit mobile version