ಇಬ್ರಾಹಿಂ ಜೆಡಿಎಸ್ ರಾಜ್ಯಾಧ್ಯಕ್ಷರಾದ ಬಳಿಕ 37 ಇದ್ದ ಶಾಸಕರ ಸಂಖ್ಯೆ 19 ಸ್ಥಾನಗಳಿಗೆ ಕುಸಿಯಿತು: ದೇವೇಗೌಡ ತೆಲ್ಲೂರು

Prasthutha|

ಕಲಬುರಗಿ: ಸಿ.ಎಂ. ಇಬ್ರಾಹಿಂ ಅವರು ಜೆಡಿಎಸ್ ರಾಜ್ಯಾಧ್ಯಕ್ಷರಾದ ಮೇಲೆ ಪಕ್ಷದ ಸಂಘಟನೆ ಕೆಟ್ಟು ಹೋಯಿತು. ಇದರಿಂದಾಗಿ 37 ಶಾಸಕರನ್ನು ಹೊಂದಿದ್ದ ಪಕ್ಷವು ಈಗ 19 ಸ್ಥಾನಗಳಿಗೆ ಕುಸಿದಿದೆ ಎಂದು ಜೆಡಿ (ಎಸ್) ರಾಜ್ಯ ಘಟಕದ ವಕ್ತಾರ ದೇವೇಗೌಡ ತೆಲ್ಲೂರು ಹೇಳಿದ್ದಾರೆ.

- Advertisement -


ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ದೇವೇಗೌಡ ತೆಲ್ಲೂರು, ಇತ್ತೀಚೆಗೆ ನಡೆದ ಪಕ್ಷದ ಸಭೆಯಲ್ಲಿ ಪಕ್ಷದ ಬಹುತೇಕ ಶಾಸಕರು ಭಾಗವಹಿಸಿ ಎಚ್ ಡಿ ದೇವೇಗೌಡ ಮತ್ತು ಕುಮಾರಸ್ವಾಮಿ ಅವರ ನಾಯಕತ್ವದಲ್ಲಿ ಸಂಪೂರ್ಣ ನಂಬಿಕೆ ಮತ್ತು ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುವ ನಿರ್ಧಾರಕ್ಕೆ ಬೆಂಬಲ ಸೂಚಿಸಿದ್ದಾರೆ ಎಂದಿದ್ದಾರೆ.


ಸಿ.ಎಂ. ಇಬ್ರಾಹಿಂ ಅವರು ಜೆಡಿಎಸ್ ರಾಜ್ಯಾಧ್ಯಕ್ಷರಾದ ಮೇಲೆ ಪಕ್ಷದ ಸಂಘಟನೆ ಕೆಟ್ಟು ಹೋಯಿತು. ಇದರಿಂದಾಗಿ 37 ಶಾಸಕರನ್ನು ಹೊಂದಿದ್ದ ಪಕ್ಷವು ಈಗ 19 ಸ್ಥಾನಗಳಿಗೆ ಕುಸಿದಿದೆ. ಪಕ್ಷದ ವರಿಷ್ಠರು ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿರುವ ಕುರಿತು ಇಬ್ರಾಹಿಂ ಅವರಿಗೂ ವಿಶ್ವಾಸಕ್ಕೆ ತೆಗೆದುಕೊಂಡಿದ್ದರೂ ಸಹ ಈಗ ವರಿಷ್ಠರ ವಿರುದ್ಧ ಮಾತನಾಡುತ್ತಿರುವುದು ಖಂಡನಾರ್ಹ. ಕೂಡಲೇ ವಿರೋಧಿ ಹೇಳಿಕೆಗಳನ್ನು ನಿಲ್ಲಿಸಬೇಕು. ಇಲ್ಲವಾದಲ್ಲಿ ಸಿ.ಎಂ. ಇಬ್ರಾಹಿಂ ಅವರ ವಿರುದ್ಧ ಪ್ರತಿಭಟನೆ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.