ಲಂಚ ಕೇಳಿದ ಅಧಿಕಾರಿ| ಭಿಕ್ಷೆ ಬೇಡಿ ಕೊಡಲು ಮುಂದಾದ ವ್ಯಕ್ತಿ!

Prasthutha|

ಕಾರವಾರ: ಕೆಲಸ ಕೊಡಿಸಲು ಲಂಚ ಕೇಳಿದ ಅಧಿಕಾರಿಯ ಮನಪರಿವರ್ತನೆಗಾಗಿ ವ್ಯಕ್ತಿಯೊಬ್ಬರು ಜನರಿಂದ ಭಿಕ್ಷೆ ಬೇಡಿ, ಹಣ ನೀಡಲು ಮುಂದಾದ ಘಟನೆ ಯಲ್ಲಾಪುರ ತಹಶೀಲ್ದಾರ್ ಕಚೇರಿಯಲ್ಲಿ ನಡೆದಿದೆ.

- Advertisement -


ಗಜಾನನ ಭಟ್ಟ ಹಾಗೂ ನಾರಾಯಣ ಭಟ್ಟ ಎಂಬ ಸಹೋದರರಿಬ್ಬರು ಯಲ್ಲಾಪುರದ ತಟಗಾರ ಗ್ರಾಮದ ಸರ್ವೇ ನಂ. 12ರಲ್ಲಿನ ಕ್ಷೇತ್ರವನ್ನು ಉಪ ನೋಂದಣಾಧಿಕಾರಿ ಕಚೇರಿ ಮೂಲಕ ವಿಭಾಗ ಮಾಡಿಕೊಂಡಿದ್ದರು. ಇದನ್ನು ಪಹಣಿ ಪತ್ರಿಕೆಯಲ್ಲಿ ದಾಖಲು ಮಾಡಲು ಕಂದಾಯ ಇಲಾಖೆ ಅಧಿಕಾರಿಯೊಬ್ಬರು 2 ಸಾವಿರ ರೂ. ಬೇಡಿಕೆ ಇಟ್ಟಿದ್ದರು. ಹೀಗಾಗಿ ಸಾರ್ವಜನಿಕರಿಂದ ಭಿಕ್ಷೆ ಬೇಡಿ ಅಧಿಕಾರಿಗೆ ಅವರು ಬೇಡಿಕೆ ಇಟ್ಟ ಹಣ ನೀಡಲು ಮುಂದಾಗಿದ್ದೇನೆ ಎಂದು ಗಜಾನನ ಭಟ್ಟ ಅವರ ಪುತ್ರ ಅಚ್ಯುತಕುಮಾರ ತಿಳಿಸಿದ್ದಾರೆ.


ಭ್ರಷ್ಟಾಚಾರದ ಕುರಿತು ಹೋರಾಟ ಮಾಡುವುದಕ್ಕಿಂತ ಮೊದಲು ಅಧಿಕಾರಿಗಳ ಮನ ಪರಿವರ್ತನೆ ಮಾಡುವುದು ಮುಖ್ಯ ಎಂದು ಭಾವಿಸಿ ಜನರಿಂದ ಭಿಕ್ಷೆ ಬೇಡಿ ಅಧಿಕಾರಿಯ ಬೇಡಿಕೆ ಪೂರೈಸಲು ನಿರ್ಧರಿಸಿದೆ. ಪ್ರಸ್ತುತ ಲಂಚ ಕೇಳಿದವರಿಗೆ ಹಣ ನೀಡಲು ಜನರಿಂದ ಸ್ವೀಕೃತವಾದ 136 ರೂ. ಅನ್ನು ಜಿಲ್ಲಾಧಿಕಾರಿಗಳ ಅಧೀನದಲ್ಲಿರುವ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಪೃಕೃತಿ ವಿಕೋಪ ನಿಧಿಗೆ ನೀಡಲಾಗುವುದು ಎಂದು ಅವರು ತಿಳಿಸಿದ್ದಾರೆ.



Join Whatsapp