ಮಂಗಳೂರು : ಸೋಶಿಯಲ್ ಡೆಮೊಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ರಾಜ್ಯ ಸರ್ಕಾರ ತರಲು ಮುಂದಾಗಿರುವ ಮತಾಂತರ ನಿಷೇಧ ಮಸೂದೆಯ ವಿರುದ್ಧ ಪ್ರತಿಭಟನೆಯು ಇಂದು ವಾಮಂಜೂರು ಜಂಕ್ಷನ್’ನಲ್ಲಿ ನಡೆಯಿತು.
ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಸಂತ ರೈಮಾಂಡ್ಸ ವಿದ್ಯಾಸಂಸ್ಥೆಯ ಪ್ರಾಧ್ಯಾಪಕಿ ಅನಮರಿಯಾ ರಾಜ್ಯ ಸರಕಾರ ತರಲು ಹೊರಟಿರುವ ಮತಾಂತರ ನಿಷೇಧ ಕಾನೂನಿನ ಕರಾಳತೆ ಭೀಕರತೆಯ ಬಗ್ಬೆ ಸವಿಸ್ತಾರವಾಗಿ ವಿವರಿಸಿದರು. ನಂತರ ಮಾತನಾಡಿದ ಎಸ್‌ಡಿಪಿಐ ಮಂಗಳೂರು ಉತ್ತರ ಕ್ಷೇತ್ರದ ಅಧ್ಯಕ್ಷ ಯಾಸೀನ್ ಅರ್ಕುಳರವರು ಮುಂದಿನ ದಿನಗಳಲ್ಲಿ ಈ ಕರಾಳ ಕಾನೂನಿನ ವಿರುದ್ಧ ಬೀದಿಗಿಳಿದು ಹೋರಾಟ ಮಾಡಲು SDPI ಕಟಿಬದ್ಧವಾಗಿದೆ ಎಂದು ರಾಜ್ಯ ಸರ್ಕಾರಕ್ಕೆ ಎಚ್ಚರಿಸಿದರು.
ಪ್ರತಿಭಟನೆಯಲ್ಲಿ ಕ್ಷೇತ್ರ ಸಮಿತಿ ಸದಸ್ಯರಾದ ಮಹಮ್ಮದ್ ಅರ್ಕುಳ, SDPI ಗುರುಪುರ ಬ್ಲಾಕ್ ಅಧ್ಯಕ್ಷ ಮುಝಮ್ಮಿಲ್ ನೂಯಿ ಗ್ರಾಮ ಸಮಿತಿ ಅಧ್ಯಕ್ಷ ರಝಕ್ ಎದುರುಪದವು, ಇಕ್ಬಾಲ್ AP, ಮೂಡುಶೆಡ್ಡೆ ಪಂಚಾಯತ್ ಸದಸ್ಯರಾದ ಶಾಜುದ್ದೀನ್, ಉಳಾಯಿಬೆಟ್ಟು ಗ್ರಾಮ ಪಂಚಾಯತ್ ಸದಸ್ಯೆ ಶೈನಾಝ್ ಉಳಾಯಿಬೆಟ್ಟು ಮುಂತಾದವರು ಉಪಸ್ಥಿತರಿದ್ದರು.