ಬಿಜೆಪಿ ಟಿಕೆಟ್ ಕೊಡಿಸುವುದಾಗಿ PDOಗೆ ಒಂದು ಕೋಟಿ ರೂ. ವಂಚಿಸಿದ ಹಾಲಶ್ರೀ ಸ್ವಾಮಿ.!?

Prasthutha|

ಬೆಂಗಳೂರು: ಚೈತ್ರಾ ಕುಂದಾಪುರ ತಂಡದಲ್ಲಿದ್ದ ಅಭಿನವ ಹಾಲಶ್ರೀ ಸ್ವಾಮೀಜಿ ಮತ್ತೊಬ್ಬರಿಗೆ 1 ಕೋಟಿ ರೂಪಾಯಿ ವಂಚಿಸಿರುವ ಬಗ್ಗೆ ಆರೋಪ ಕೇಳಿಬಂದಿದೆ.

- Advertisement -

ಎಸ್ ಸಿ ಮೀಸಲು ಕ್ಷೇತ್ರದಿಂದ ಸ್ಪರ್ಧಿಸುವ ಆಸಕ್ತಿ ಹೊಂದಿದ್ದ ಶಿರಹಟ್ಟಿ ತಾಲೂಕಿನ ರಣತೂರು ಗ್ರಾಮ ಪಂಚಾಯತ್ ಪಿಡಿಒ ಸಂಜಯ್ ಚವಡಾಳ ಎಂಬಾತ ಇದೀಗ ಹಾಲಶ್ರೀ ವಿರುದ್ಧ ವಂಚನೆ ಆರೋಪ ಹೊರಿಸಿ, ಮುಂಡರಗಿ ಪೊಲೀಸ್ ಠಾಣೆಗೆ ಲಿಖಿತ ದೂರು ನೀಡಿದ್ದಾರೆ.


ಶಿರಹಟ್ಟಿ ಮೀಸಲು ಕ್ಷೇತ್ರದ ಟಿಕೆಟ್ ಆಕಾಂಕ್ಷಿ ಎಂದು ಬಿಂಬಿಸಿಕೊಂಡಿದ್ದ ಸಂಜಯ್, ಚುನಾವಣೆಗೆ ಮುಂಚಿತವಾಗಿ 1 ಕೋಟಿ ರೂಪಾಯಿ ಹಣವನ್ನ ಶ್ರೀಗಳಿಗೆ ನೀಡಿದ್ದ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಸೆಪ್ಟೆಂಬರ್ 19 ರಂದು ಠಾಣೆಗೆ ಬಂದು ಸಂಜಯ್ ದೂರು ನೀಡಿದ್ದಾರೆ. ಸಸ್ಪೆಂಡ್ ಆಗಿರುವ ಪಿಡಿಒ ಸಂಜಯ್ ಚವಡಾಳಗೆ ಸಮರ್ಪಕ ದಾಖಲೆ ತೆಗೆದುಕೊಂಡು ಬರುವಂತೆ ಮುಂಡರಗಿ ಪೊಲೀಸರು ಸೂಚಿಸಿದ್ದಾರೆ.

Join Whatsapp