Home ಟಾಪ್ ಸುದ್ದಿಗಳು ದಲಿತರಿಗೆ ಕ್ಷೌರ ನಿರಾಕರಣೆ: ದೂರು ದಾಖಲಿಸಲು ಪೊಲೀಸರು ಹಿಂದೇಟು

ದಲಿತರಿಗೆ ಕ್ಷೌರ ನಿರಾಕರಣೆ: ದೂರು ದಾಖಲಿಸಲು ಪೊಲೀಸರು ಹಿಂದೇಟು

ಚಾಮರಾಜನಗರ: ದಲಿತ ಎಂಬ ಕಾರಣಕ್ಕೆ ಕ್ಷೌರ ಮಾಡಲು ನಿರಾಕರಿಸಿರುವ ಅಮಾನವೀಯ ಘಟನೆ ಚಾಮರಾಜನಗರ ತಾಲೂಕಿನ ಸಾಗಡೆ ಗ್ರಾಮದಲ್ಲಿ ನಡೆದಿದೆ.

ಸಾಗಡೆ ಗ್ರಾಮದ ಕಾರ್ತಿಕ್ ಎಂಬ ಯುವಕನಿಗೆ ಜಾತಿ ಕಾರಣದಿಂದ ಕ್ಷೌರ ನಿರಾಕರಿಸಿದ್ದಾರೆ. ಈ ಸಂಬಂಧ ನೊಂದ ಯುವಕ ಚಾಮರಾಜನಗರ ಗ್ರಾಮಾಂತರ ಠಾಣೆಗೆ ದೂರು ನೀಡಿದ್ದು, ಎಸ್ಸಿ, ಎಸ್ಟಿ ದೌರ್ಜನ್ಯ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಸೂಕ್ತ ಕಾನೂನು ಕ್ರಮ ಜರುಗಿಸಬೇಕೆಂದು ಕಾರ್ತಿಕ್ ಒತ್ತಾಯಿಸಿದ್ದಾನೆ. ಕಾರ್ತಿಕ್ ದೂರು ನೀಡಿದರೂ ಪೊಲೀಸರು ಪ್ರಕರಣ ದಾಖಲಿಸಲು ಹಿಂದೇಟು ಹಾಕುತ್ತಿದ್ದಾರೆ ಎಂಬ ಆರೋಪಗಳು ಕೇಳಿಬಂದಿವೆ.

Join Whatsapp
Exit mobile version