Home ಟಾಪ್ ಸುದ್ದಿಗಳು ರಾಷ್ಟ್ರಧ್ವಜಕ್ಕೆ ಅಪಮಾನ: ಈಶ್ವರಪ್ಪ ವಿರುದ್ಧ ದೆಹಲಿಯಲ್ಲಿ ದೂರು ದಾಖಲು

ರಾಷ್ಟ್ರಧ್ವಜಕ್ಕೆ ಅಪಮಾನ: ಈಶ್ವರಪ್ಪ ವಿರುದ್ಧ ದೆಹಲಿಯಲ್ಲಿ ದೂರು ದಾಖಲು

ದೆಹಲಿ: ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ ದೆಹಲಿಯಲ್ಲಿ ಆದ್ಮ ಆದ್ಮಿ ಪಕ್ಷದ ರಾಜ್ಯಸಭಾ ಸದಸ್ಯ ಸಂಜಯ್ ಸಿಂಗ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.


ಒಂದಲ್ಲ ಒಂದು ದಿನ ಕೇಸರಿ ಧ್ವಜ ವೇ ಭಾರತದ ರಾಷ್ಟ್ರಧ್ವಜವಾಗುತ್ತದೆ ಎಂದು ಈಶ್ವರಪ್ಪ ಹೇಳಿಕೆ ನೀಡಿದ್ದರು. ಇಂಥ ಹೇಳಿಕೆ ನೀಡಿದ್ದ ಈಶ್ವರಪ್ಪ ಅವರನ್ನು ಬಂಧಿಸಬೇಕು ಎಂದು ಸಂಜಯ್ ಸಿಂಗ್ ಆಗ್ರಹಿಸಿದ್ದಾರೆ.


ಈ ಕುರಿತು ಪ್ರತಿಕ್ರಿಯಿಸಿರುವ ಸಂಜಯ್ ಸಿಂಗ್, ‘ಕರ್ನಾಟಕದ ಮಾಜಿ ಸಚಿವ, ಹಾಲಿ ಶಾಸಕ ಈಶ್ವರಪ್ಪ ವಿರುದ್ಧ ಎಫ್ ಐಆರ್ ದಾಖಲಿಸಲು ಅರ್ಜಿ ನೀಡಿದ್ದೇನೆ. ಈಶ್ವರಪ್ಪ ಅವರು ರಾಷ್ಟ್ರಧ್ವಜವನ್ನು ಅವಮಾನಿಸಿದ್ದಾರೆ. RSS ಪ್ರಧಾನ ಕಚೇರಿಯ ಮೇಲೆ ಕಳೆದ 50 ವರ್ಷಗಳಿಂದ ರಾಷ್ಟ್ರಧ್ವಜ ಹಾರಿಸುತ್ತಿಲ್ಲ. ಬಿಜೆಪಿ ಸಹ ರಾಷ್ಟ್ರಧ್ವಜವನ್ನು ವಿರೋಧಿಸಿತ್ತು’ ಎಂದು ಹೇಳಿದ್ದಾರೆ.
ರಾಷ್ಟ್ರಧ್ವಜವನ್ನು ಅವಮಾನಿಸಿರುವ ಈಶ್ವರಪ್ಪ ವಿರುದ್ಧ ಪ್ರಕರಣ ದಾಖಲಿಸುವುದಷ್ಟೇ ಅಲ್ಲ, ಅವರನ್ನು ಬಂಧಿಸಬೇಕು’ ಎಂದು ಆಗ್ರಹಿಸಿದ್ದಾರೆ.

Join Whatsapp
Exit mobile version