Home ಟಾಪ್ ಸುದ್ದಿಗಳು ವಾಣಿಜ್ಯ ಬಳಕೆಯ LPG ಸಿಲಿಂಡರ್ ದರ 25 ರೂ. ಹೆಚ್ಚಳ

ವಾಣಿಜ್ಯ ಬಳಕೆಯ LPG ಸಿಲಿಂಡರ್ ದರ 25 ರೂ. ಹೆಚ್ಚಳ

ನವದೆಹಲಿ: ಇಂದಿನಿಂದಲೇ (ಮಾ.1) ಜಾರಿಗೆ ಬರುವಂತೆ 19 ಕೆಜಿ ವಾಣಿಜ್ಯ ಬಳಕೆಯ ಎಲ್ ಪಿಜಿ ಗ್ಯಾಸ್ ಸಿಲಿಂಡರ್ ಗಳ ಬೆಲೆಯನ್ನು 25 ರೂ.ಗಳಷ್ಟು ಹೆಚ್ಚಿಸಲಾಗಿದೆ.


ತೈಲ ಮಾರುಕಟ್ಟೆ ಕಂಪನಿಗಳು ಶುಕ್ರವಾರ ವಾಣಿಜ್ಯ LPG ಗ್ಯಾಸ್ ಸಿಲಿಂಡರ್ ಗಳ ಬೆಲೆಗಳನ್ನು ಪರಿಷ್ಕರಿಸಿವೆ. ಇದರೊಂದಿಗೆ 19 ಕೆಜಿ ವಾಣಿಜ್ಯ ಎಲ್ ಪಿಜಿ ಸಿಲಿಂಡರ್ ಗಳ ಬೆಲೆಯನ್ನು 25 ರೂ.ಗಳಷ್ಟು ಹೆಚ್ಚಿಸಲಾಗಿದ್ದು, ಹೊಸ ದರಗಳು ಇಂದಿನಿಂದ ಜಾರಿಗೆ ಬರಲಿವೆ.


ರಾಜಧಾನಿ ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಬಳಕೆ ಸಿಲಿಂಡರ್ನ ಚಿಲ್ಲರೆ ಬೆಲೆ 1,795 ರೂಪಾಯಿ ಆಗಿದೆ. ಮುಂಬೈನಲ್ಲಿ ಇಂದಿನಿಂದ 19 ಕೆಜಿ ಸಿಲಿಂಡರ್ 1,749ಕ್ಕೆ ಮಾರಾಟವಾಗಲಿದೆ. ಚೆನ್ನೈ ಮತ್ತು ಕೋಲ್ಕತ್ತಾದಲ್ಲಿ, ವಾಣಿಜ್ಯ ಎಲ್ಪಿಜಿ ಸಿಲಿಂಡರ್ಗಳ ಬೆಲೆ ಕ್ರಮವಾಗಿ 1,960 ರೂಪಾಯಿ ಮತ್ತು 1,911 ಕ್ಕೆ ಏರಿಕೆಯಾಗಿದೆ.

Join Whatsapp
Exit mobile version