ಹಾಲಿನ ದರ 3 ರೂ. ಹೆಚ್ಚಳ; ಸರ್ಕಾರಕ್ಕೆ ಮನವಿ ಸಲ್ಲಿಸಿದ ಕೆಎಂಎಫ್‌

Prasthutha|

ಬೆಂಗಳೂರು: ಹಾಲಿನ ದರವನ್ನು ಪ್ರತಿ ಲೀಟರ್‌ಗೆ ₹3 ರಂತೆ ಹೆಚ್ಚಿಸುವಂತೆ ಕರ್ನಾಟಕ ಹಾಲು ಮಹಾಮಂಡಳಿ ಸರ್ಕಾರಕ್ಕೆ ಮನವಿ ಸಲ್ಲಿಸಿದೆ.

- Advertisement -

ಸೋಮವಾರ  ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಮಂಡಳಿಯ ವ್ಯವಸ್ಥಾಪಕ ನಿರ್ದೇಶಕ ಬಿ.ಸಿ.ಸತೀಶ್‌,  ಖಾಸಗಿಯಾಗಿ ಮಾರಾಟ ಮಾಡುವ ಹಾಲಿನ ದರಕ್ಕೆ ಹೋಲಿಸಿದರೆ ಕೆಎಂಎಫ್‌ ಹಾಲಿನ ದರ ಕಡಿಮೆಯಾಗಿದ್ದು, ಈ ನಿಟ್ಟಿನಲ್ಲಿ  ದರ ಹೆಚ್ಚಿಸುವಂತೆ ಕೋರಲಾಗಿದೆ. ಕೆಎಂಎಫ್‌ ಒಂದು ಲೀಟರ್‌ ಹಾಲನ್ನು ₹37ಕ್ಕೆ ಮಾರಾಟ ಮಾಡುತ್ತಿದ್ದು, ಖಾಸಗಿಯವರು ₹40ಕ್ಕೂ ಹೆಚ್ಚು ದರದಲ್ಲಿ ಮಾರಾಟ ಮಾಡುತ್ತಿದ್ದಾರೆ’ ಎಂದು ಹೇಳಿದರು.

ದರ ಹೆಚ್ಚಳದ ಬಗ್ಗೆ ಮುಖ್ಯಮಂತ್ರಿಯೊಂದಿಗೆ ಚರ್ಚೆ ನಡೆಸಿರುವ  ಕೆಎಂಎಫ್‌ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಏರಿಕೆ ದರದ ಮೊತ್ತವನ್ನು ರೈತರಿಗೆ ವರ್ಗಾಯಿಸುವುದಾಗಿ ತಿಳಿಸಿದ್ದಾರೆ. ಮುಖ್ಯಮಂತ್ರಿ ಅವರು ಈ ಬಗ್ಗೆ ಪರಿಶೀಲಿಸುವುದಾಗಿ ಭರವಸೆ ನೀಡಿದ್ದಾರೆ’ ಎಂದು ತಿಳಿಸಿದರು.

- Advertisement -

 ‘ರೈತರ ಪ್ರೋತ್ಸಾಹ ಧನದ ಎರಡನೇ ಕಂತು ₹1,250 ಕೋಟಿಯನ್ನು ಸರ್ಕಾರ ಬಿಡುಗಡೆ ಮಾಡಿದೆ. ಮೂರನೇ ಕಂತು ಶೀಘ್ರ ಬಿಡುಗಡೆಯಾಗಲಿದ್ದು, ನೇರವಾಗಿ ರೈತರ ಖಾತೆಗಳಿಗೆ ಹಣ ವರ್ಗಾವಣೆ ಆಗಲಿದೆ. 2019–20ರ ಬಾಕಿ ಪ್ರೋತ್ಸಾಹ ಧನವನ್ನೂ ಬಿಡುಗಡೆ ಮಾಡಲಾಗಿದೆ’ ಎಂದು ಮಾಹಿತಿ ನೀಡಿದರು.

Join Whatsapp