41 ಕಾರ್ಮಿಕರನ್ನು ಮತ್ತು ಯಶಸ್ವಿ ಸುರಂಗ ಕಾರ್ಯಾಚರಣೆಯನ್ನು ಶ್ಲಾಘಿಸಿದ ಪ್ರಧಾನಿ

Prasthutha|

ನವದೆಹಲಿ: ಉತ್ತರಾಖಂಡದ ನಿರ್ಮಾಣ ಹಂತದ ಸುರಂಗದಲ್ಲಿ ಸಿಲುಕಿದ್ದ 41 ಕಾರ್ಮಿಕರನ್ನು ಮತ್ತು ಅವರನ್ನು ಯಶಸ್ವಿಯಾಗಿ ಹೊರಗೆ ತಂದ ಕಾರ್ಯಾಚರಣೆಯನ್ನು ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ. ನಮ್ಮ ಕಾರ್ಯಕರ್ತರ ರಕ್ಷಣಾ ಕಾರ್ಯಾಚರಣೆಯ ಯಶಸ್ಸು ಎಲ್ಲರಿಗೂ ಭಾವನಾತ್ಮಕ ಕ್ಷಣವಾಗಿದೆ ಎಂದು ಪ್ರಧಾನಿ ಹೇಳಿದ್ದಾರೆ. ಸಿಕ್ಕಿಬಿದ್ದ ಕಾರ್ಮಿಕರಿಗೆ, ನಿಮ್ಮ ಧೈರ್ಯ ಮತ್ತು ತಾಳ್ಮೆ ಸ್ಪೂರ್ತಿದಾಯಕವಾಗಿದೆ ಎಂದು ನಾನು ಹೇಳಲು ಬಯಸುತ್ತೇನೆ. ನಾನು ನಿಮಗೆ ಉತ್ತಮ ಆರೋಗ್ಯ ಮತ್ತು ಯೋಗಕ್ಷೇಮವನ್ನ ಬಯಸುತ್ತೇನೆ ಎಂದು ಹೇಳಿದ್ದಾರೆ. X ಮೂಲಕ ಪ್ರಧಾನಿ ಹೀಗೆ ಸಂದೇಶ ನೀಡಿದ್ದಾರೆ.

- Advertisement -

ಕಾರ್ಮಿಕರು ಮಾತ್ರವಲ್ಲ, ಅವರ ಸಂಬಂಧಿಕರು ಕೂಡ ಇಂತಹ ಸಮಯದಲ್ಲಿ ಅಪಾರ ತಾಳ್ಮೆ ಮತ್ತು ಧೈರ್ಯವನ್ನು ತೋರಿಸಿದರು ಎಂದು ಮೋದಿ ಹೇಳಿದ್ದಾರೆ.

ರಕ್ಷಣಾ ಕಾರ್ಯಾಚರಣೆಯಲ್ಲಿ ಭಾಗಿಯಾಗಿರುವ ಪ್ರತಿಯೊಬ್ಬರ ಸ್ಫೂರ್ತಿಗೆ ನಾನು ನಮಸ್ಕರಿಸುತ್ತೇನೆ. ಅವರ ಶೌರ್ಯ ಮತ್ತು ದೃಢ ನಿಶ್ಚಯವು ಕಾರ್ಮಿಕರಿಗೆ ಹೊಸ ಜೀವನವನ್ನು ನೀಡಿದೆ. ಈ ರಕ್ಷಣಾ ಕಾರ್ಯಾಚರಣೆಯಲ್ಲಿ ಭಾಗಿಯಾಗಿರುವ ಪ್ರತಿಯೊಬ್ಬ ವ್ಯಕ್ತಿಯು ಮಾನವೀಯತೆ ಮತ್ತು ಸಂಘಟಿತ ಕೆಲಸಕ್ಕೆ ಉದಾಹರಣೆಯಾಗಿದ್ದಾರೆ ಎಂದು ಮೋದಿ ಹೇಳಿದರು.

Join Whatsapp