ದೇಶದ ‘ಉದ್ದದ ಸಮುದ್ರ ಸೇತುವೆ’ ಉದ್ಘಾಟಿಸಿದ ಪ್ರಧಾನಿ

Prasthutha|

ಮುಂಬೈ: ದೇಶದ ಅತಿ ಉದ್ದದ ಸಮುದ್ರ ಸೇತುವೆ ಮುಂಬೈ ಟ್ರಾನ್ಸ್-ಹಾರ್ಬರ್ ಲಿಂಕ್ ಅನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದ್ದಾರೆ.

- Advertisement -

ಅಟಲ್ ಬಿಹಾರಿ ವಾಜಪೇಯಿ ಸೇವಾರಿ-ನವಾ ಶೇವಾ ಅಟಲ್ ಸೇತು ಎಂದು ಹೆಸರಿಸಲಾಗಿರುವ ಈ ಸೇತುವೆಯನ್ನು 17,840 ಕೋಟಿ ರೂ.ಗಳ ವೆಚ್ಚದಲ್ಲಿ ನಿರ್ಮಿಸಲಾಗಿದೆ ಎಂದು ಸರಕಾರ ತಿಳಿಸಿದೆ.

2016ರಲ್ಲಿ ನರೇಂದ್ರ ಮೋದಿ ಈ ಸೇತುವೆಗೆ ಶಂಕುಸ್ಥಾಪನೆ ನೆರವೇರಿಸಿದ್ದರು. ಸಮುದ್ರದ ಮೇಲೆ 16.5 ಕಿ.ಮೀ ಉದ್ದ ಮತ್ತು ಭೂಮಿಯಲ್ಲಿ ಸುಮಾರು 5.5 ಕಿ.ಮೀ ಉದ್ದವನ್ನು ಹೊಂದಿರುವ ಇದು ಭಾರತದ ಅತಿ ಉದ್ದದ ಹಾಗೂ ದೇಶದ ಅತಿ ಉದ್ದದ ಸಮುದ್ರ ಸೇತುವೆಯಾಗಿದೆ. ಸೇತುವೆ ಒಟ್ಟು 21.8 ಕಿ.ಮೀ ಉದ್ದವಿದ್ದು, ಆರು ಪಥಗಳನ್ನು ಹೊಂದಿದೆ. ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತು ನವೀ ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎರಡಕ್ಕೂ ಸಂಪರ್ಕವನ್ನು ಹೆಚ್ಚಿಸುತ್ತದೆ.

Join Whatsapp