ಸನಾತನ ಧರ್ಮ ಯಾವಾಗ ಹುಟ್ಟಿತು, ಯಾರು ಹುಟ್ಟಿಸಿದರೆಂಬುದೇ ಪ್ರಶ್ನೆ: ಸಚಿವ ಜಿ ಪರಮೇಶ್ವರ್

Prasthutha|

ತುಮಕೂರು: ಸನಾತನ ಧರ್ಮ ಯಾವಾಗ ಹುಟ್ಟಿತು, ಯಾರು ಹುಟ್ಟಿಸಿದರೆಂಬುದೇ ಪ್ರಶ್ನೆ ಎಂದು ಗೃಹ ಇಲಾಖೆ ಸಚಿವ ಜಿ. ಪರಮೇಶ್ವರ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.  

- Advertisement -

ತುಮಕೂರು ಜಿಲ್ಲೆಯ ಕೊರಟಗೆರೆಯಲ್ಲಿ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪ್ರಪಂಚದ ಇತಿಹಾಸದಲ್ಲಿ ಅನೇಕ ಧರ್ಮಗಳು ಹುಟ್ಟಿಕೊಂಡಿವೆ. ಸನಾತನ ಧರ್ಮವನ್ನು ಯಾರು ಹುಟ್ಟಿಸಿದರು, ಯಾವಾಗ ಹುಟ್ಟಿತು ಎಂಬುದು ಇನ್ನೂ ಪ್ರಶ್ನಾರ್ಥಕ ಚಿಹ್ನೆಯಾಗಿಯೇ ಇದೆ. ಈ ವಿಚಾರದಲ್ಲಿ ಪ್ರಶ್ನಾರ್ಥಕ ಚಿಹ್ನೆ ತೆಗೆದಿಲ್ಲ ಎಂದು ಹೇಳಿದ್ದಾರೆ.

ಬೌದ್ಧ ಧರ್ಮ ಹಾಗೂ ಜೈನ ಧರ್ಮ ನಮ್ಮ ದೇಶದಲ್ಲಿ ಹುಟ್ಟಿತು. ಹೊರಗಡೆಯಿಂದ ಇಸ್ಲಾಂ ಧರ್ಮ ಹಾಗೂ ಕ್ರೈಸ್ತ ಧರ್ಮ ಬಂದಿವೆ. ಮನುಕುಲಕ್ಕೆ ಒಳ್ಳೆಯದಾಗಬೇಕೆಂಬುದೇ ಎಲ್ಲಾ ಧರ್ಮಗಳ ಸಾರಾಂಶ ಎಂದು ಪರಮೇಶ್ವರ್ ಹೇಳಿದ್ದಾರೆ.



Join Whatsapp