ಬೆಂಗಳೂರಿನಲ್ಲಿ ಮುಸಲ್ಮಾನ ಅನೈತಿಕ ಗೂಂಡಾಗಳು ಭಿನ್ನ ಧರ್ಮದ ಗಂಡು ಹೆಣ್ಣಿನ ಮೇಲೆ ಹಲ್ಲೆ ನಡೆಸಿದಾಗ ಸಿಡಿದೆದ್ದು ಕಾನೂನಿನ ಪಾಠ ಮಾಡಿದ್ದ ಮುಖ್ಯಮಂತ್ರಿ ಬೊಮ್ಮಾಯಿ ಮಂಗಳೂರಿನ ಸಂಘಪರಿವಾರದ ಅನೈತಿಕ ಗೂಂಡಾಗಿರಿಯ ವಿಷಯದಲ್ಲಿ ಉಲ್ಟಾ ಹೊಡೆದಿದ್ದಾರೆ.
ಭಾವನೆಗಳಿಗೆ ಧಕ್ಕೆ, ಕ್ರಿಯೆಗೆ ಪ್ರತಿಕ್ರಿಯೆ ಎಂಬುದು ಎಲ್ಲಾ ಮತೀಯವಾದಿಗಳ ರೆಡಿಮೇಡ್ ಡೈಲಾಗ್. ಸಂವಿಧಾನದ ಮೇಲೆ ಪ್ರತಿಜ್ಞೆ ಮಾಡಿ ಅಧಿಕಾರ ಸ್ವೀಕರಿಸಿರುವ ಮುಖ್ಯಮಂತ್ರಿಯೊಬ್ಬ ಅದೇ ಡೈಲಾಗ್ ಹೊಡೆಯುತ್ತಾರೆ, ಅನೈತಿಕ ಪೊಲೀಸ್ ಗಿರಿಯನ್ನು ಸಮರ್ಥಿಸುತ್ತಾರೆ ಅಂತಾದರೆ ಗತಿಯೇನು ?
ಮುಖ್ಯಮಂತ್ರಿಯ ಈ ಮಾತಿನಿಂದ ಈಗಾಗಲೇ ಹೆಂಡ ಕುಡಿದ ಕಪಿಗಳಂತೆ ಆಡುತ್ತಿರುವ ಮತೀಯವಾದಿ ಸಂಘಟನೆಗಳ ಕಾರ್ಯಕರ್ತರು ಮತ್ತಷ್ಟು ಪ್ರಚೋದಿತರಾಗಿ ಬೀದಿಗಿಳಿಯುವುದು ಖಂಡಿತ. ಕ್ರಿಯೆಗೆ ಪ್ರತಿಕ್ರಿಯೆ ಎಂದು ಮತ್ತೊಂದು ಕೋಮಿನ ಅನೈತಿಕ ಪೊಲೀಸರೂ ಸ್ಪರ್ಧೆಗೆ ಬಿದ್ದರೆ ಪರಿಸ್ಥಿತಿ ಎಲ್ಲಿಗೆ ತಲುಪುತ್ತದೆ ? ಮುಖ್ಯಮಂತ್ರಿಯೊಬ್ಬ ಇಷ್ಟು ಬೇಜವಾಬ್ದಾರಿತನ ಮೆರೆಯುವುದು ನಾಚಿಕೆಗೇಡು. ಪ್ರಜಾಪ್ರಭುತ್ವ ದೇಶದ ದುರಂತ. ತನ್ನ ಈ ನಾಚಿಕೆಗೇಡಿನ ಮಾತಿಗಾಗಿ ಮುಖ್ಯಮಂತ್ರಿ ಬೊಮ್ಮಾಯಿ ಜನತೆಯ ಕ್ಷಮೆ ಯಾಚಿಸಬೇಕು.