ಸಮಾಜದಲ್ಲಿ ಅರಿವು ಮೂಡಿಸುವಲ್ಲಿ ಮಾಧ್ಯಮ ಗಳ ಪಾತ್ರ ಮಹತ್ವದ್ದು: ರವಿಕುಮಾರ್ ಎಂ.ಆರ್

Prasthutha|

ಮಂಗಳೂರು: ಸಮಾಜದ ಅಭಿವೃದ್ಧಿ ಯಲ್ಲಿ ಪತ್ರಿಕಾ ರಂಗ ಜನರಲ್ಲಿ ಅರಿವು ಮೂಡಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತಾ ಬಂದಿದೆ ಎಂದು ದ.ಕ. ಜಿಲ್ಲಾ ಧಿಕಾರಿ ರವಿಕುಮಾರ್ ಎಂ.ಆರ್ ತಿಳಿಸಿದ್ದಾರೆ.
ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಪತ್ರಿಕಾ ಭವನ ಮತ್ತು ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ಹಮ್ಮಿಕೊಂಡಿರುವ ರಾಷ್ಟ್ರೀಯ ಪತ್ರಿಕಾ ದಿನಾಚರಣೆಯನ್ನು ನಗರದ ಪತ್ರಿಕಾ ಭವನ ದಲ್ಲಿಂದು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

- Advertisement -

ಮಾಧ್ಯಮಗಳು ಸಮಾಜದಲ್ಲಿ ಜನರಿಗೆ ಮಾಹಿತಿ ನೀಡುವ ಮೂಲಕ ಅತ್ಯಂತ ಪ್ರಭಾವ ಶಾಲಿಯಾಗಿ ಜನರ ನಡುವೆ ಇದೆ. ಜನರ ಸಮಸ್ಯೆ ಪರಿಹಾರದ ನಿಟ್ಟಿನಲ್ಲಿ, ಸಂವಿಧಾನದ ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗದ ಜೊತೆ ಪತ್ರಿಕಾ ರಂಗ ಮಹತ್ವ ವನ್ನು ಪಡೆದಿದೆ.ದ.ಕ.ಜಿಲ್ಲಾ ಪತ್ರ ಕರ್ತರ ಸಂಘ ಸಮಾಜ ಮುಖಿ ಕಾರ್ಯಕ್ರಮದಲ್ಲಿ ತೊಡಗಿರುವುದು ಶ್ಲಾಘನೀಯ ಎಂದು ರವಿಕುಮಾರ್ ತಿಳಿಸಿದ್ದಾರೆ.

ಈ ಸಂದರ್ಭ ದಲ್ಲಿ ಸಹ್ಯಾದ್ರಿ ಇಂಜಿನಿಯ ರಿಂಗ್ ಕಾಲೇಜಿನ ಪ್ರೊಫೆಸರ್ ಡಾ.ಅನಂತ ಪ್ರಭು ಡಿಜಿಟಲ್ ತಂತ್ರಜ್ಞಾನ ದಲ್ಲಿ ಸುರಕ್ಷಾ ವಿಧಾನ ಗಳ (ಸುರಕ್ಷತಾ ಸಾಧನಗಳು) ಬಗ್ಗ ಉಪನ್ಯಾಸ ನೀಡಿದರು.

- Advertisement -

ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಅಧ್ಯಕ್ಷತೆ ವಹಿಸಿದ್ದರು.ರಾಜ್ಯ ಮಾಧ್ಯಮ ಅಕಾಡೆಮಿಯ ಸದಸ್ಯ ಜಗನ್ನಾಥ ಶೆಟ್ಟಿ ಬಾಳ,ಪತ್ರಿಕಾ ಭವನದ ಅಧ್ಯಕ್ಷ ರಾಮಕೃಷ್ಣ , ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಅನ್ನು ಮಂಗಳೂರು, ದ.ಕ.ಜಿಲ್ಲಾ ಕಾರ್ಯ ನಿರತ ಪತ್ರ ಕರ್ತರ ಸಂಘದ ಉಪಾಧ್ಯಕ್ಷ ಭಾಸ್ಕರ ರೈ, ಕೋಶಾಧಿಕಾರಿ ಪುಷ್ಪ ರಾಜ್ ಬಿ.ಎನ್ , ರಾಜ್ಯ ಸಮಿತಿ ಸದಸ್ಯ ಇಬ್ರಾಹಿಂ ಅಡ್ಕಸ್ಥಳ ಮೊದಲಾದವರು ಉಪಸ್ಥಿತರಿದ್ದರು.

ರಾಷ್ಟ್ರೀಯ ಪತ್ರಕರ್ತರ ಒಕ್ಕೂಟದ ಕಾರ್ಯಕಾರಿ ಸಮಿತಿ ಸದಸ್ಯ ಪಿ.ಬಿ. ಹರೀಶ್ ರೈ ಕಾರ್ಯ ಕ್ರಮ ನಿರೂಪಿಸಿ ದರು. ದ.ಕ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ ವಂದಿಸಿದರು.



Join Whatsapp