Home ಟಾಪ್ ಸುದ್ದಿಗಳು ರೈಲು ದುರಂತಕ್ಕೆ ಮೂಲ ಕಾರಣ ಹಾಗೂ ಕಾರಣಕರ್ತರನ್ನು ಪತ್ತೆಹಚ್ಚಲಾಗಿದೆ: ಅಶ್ವಿನಿ ವೈಷ್ಣವ್

ರೈಲು ದುರಂತಕ್ಕೆ ಮೂಲ ಕಾರಣ ಹಾಗೂ ಕಾರಣಕರ್ತರನ್ನು ಪತ್ತೆಹಚ್ಚಲಾಗಿದೆ: ಅಶ್ವಿನಿ ವೈಷ್ಣವ್

ಒಡಿಶಾ: ಬಾಲಸೋರ್​ ನಲ್ಲಿ ಸಂಭವಿಸಿದ ಮೂರು ರೈಲುಗಳ ನಡುವಿನ ಅಪಘಾತಕ್ಕೆ ಏನು ಕಾರಣ ಹಾಗೂ ಕಾರಣಕರ್ತರು ಯಾರೆಂಬುದನ್ನು ಪತ್ತೆಹಚ್ಚಲಾಗಿದ್ದು, ಶೀಘ್ರವೇ ಮಾಹಿತಿ ನೀಡಲಾಗುವುದು ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ.

ಎರಡು ಪ್ಯಾಸೆಂಜರ್ ರೈಲು ಹಾಗೂ ಗೂಡ್ಸ್​ ರೈಲು ನಡುವೆ ಸಂಭವಿಸಿದ ಅಪಘಾತದಲ್ಲಿ 288 ಮಂದಿ ಮೃತಪಟ್ಟಿದ್ದು, 1,100ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ರೈಲ್ವೆ ಸುರಕ್ಷತಾ ಆಯುಕ್ತರು ತನಿಖೆ ನಡೆಸಿದ್ದು, ಘಟನೆಗೆ ಕಾರಣ ಹಾಗೂ ಈ ಅವಘಡಕ್ಕೆ ಕಾರಣರಾದವರನ್ನು ಗುರುತಿಸಿದ್ದಾರೆ. ಎಲೆಕ್ಟ್ರಾನಿಕ್​ ಇಂಟರ್​ಲಾಕಿಂಗ್​ನಲ್ಲಿರುವ ಬದಲಾವಣೆಯಿಂದ ಇದು ಸಂಭವಿಸಿದೆ ಎಂದು ಸುದ್ದಿಸಂಸ್ಥೆ ಎಎನ್​ಐಗೆ ತಿಳಿಸಿದ್ದಾರೆ.

Join Whatsapp
Exit mobile version