ಕೇಸರಿ ಶಾಲು ವಿವಾದವನ್ನು ಬಿಜೆಪಿಯೇ ಸೃಷ್ಟಿಸುತ್ತಿದೆ: ಸಿದ್ದರಾಮಯ್ಯ

Prasthutha|

ಬೆಂಗಳೂರು: ಕೇಸರಿ ಶಾಲು ವಿವಾದವನ್ನು ಬಿಜೆಪಿಯೇ ಸೃಷ್ಟಿಸುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

- Advertisement -

ಈ ಬಗ್ಗೆ  ಬೆಂಗಳೂರಿನಲ್ಲಿ  ಮಾತನಾಡಿದ ಅವರು, ಸಮವಸ್ತ್ರ ಕಡ್ಡಾಯ ಮಾಡಬೇಕು ಎಂದು ಎಲ್ಲೂ ಹೇಳಿಲ್ಲ. ಇದು ಸಂವಿಧಾನದಲ್ಲಿ ನೀಡಿರುವ ಮೂಲಭೂತ ಹಕ್ಕಾಗಿದೆ. ವೈಯಕ್ತಿಕವಾಗಿ ಹೇಳಬೇಕಾದರೆ ಇದು ಮಕ್ಕಳ ಮೂಲಭೂತ ಹಕ್ಕು. ಈ ವಿವಾದಕ್ಕೆ ಸಂಬಂಧಪಟ್ಟಂತೆ ಕುಂದಾಪುರದ ಸರ್ಕಾರಿ ಕಾಲೇಜಿನ ಪ್ರಾಂಶುಪಾಲರು ಗೇಟ್​ ಬಂದ್​ ಮಾಡಿದ್ದು, ಸಂವಿಧಾನ ವಿರೋಧ. ಸರ್ಕಾರ ಇದಕ್ಕೆಲ್ಲ ಕುಮ್ಮಕ್ಕು ನೀಡಬಾರದು ಮತ್ತು ಶಿಕ್ಷಣದಲ್ಲಿ ರಾಜಕೀಯ ಬೆರಸಬಾರದು ಎಂದು ತಿಳಿಸಿದರು.

Join Whatsapp