Home ಟಾಪ್ ಸುದ್ದಿಗಳು ಆ.30ರಿಂದ ಮೂರು ದಿನ ಮಂಗಳೂರಿನಲ್ಲಿ 2ನೇ ಆವೃತ್ತಿಯ ‘ಕಬಡ್ಡಿ ಪ್ರೀಮಿಯರ್ ಲೀಗ್’

ಆ.30ರಿಂದ ಮೂರು ದಿನ ಮಂಗಳೂರಿನಲ್ಲಿ 2ನೇ ಆವೃತ್ತಿಯ ‘ಕಬಡ್ಡಿ ಪ್ರೀಮಿಯರ್ ಲೀಗ್’

►ಈ ಬಾರಿ ಆಹಾರೋತ್ಸವ ಮತ್ತು ವಿನೋದ ಮೇಳ


ಮಂಗಳೂರು: “ಶೆಫ್ ಟಾಕ್ ಸೀಸನ್ -2″ ಕಬಡ್ಡಿ ಪ್ರೀಮಿಯರ್ ಲೀಗ್ ಆಗಸ್ಟ್ 30ರಿಂದ ಸೆಪ್ಟೆಂಬರ್ 1ರ ವರೆಗೆ ನಗರದ ಕರಾವಳಿ ಉತ್ಸವ ಮೈದಾನದಲ್ಲಿ ನಡೆಯಲಿದ್ದು ಆಗಸ್ಟ್ 30ರಂದು ಆಹಾರೋತ್ಸವದ ಉದ್ಘಾಟನೆ ನಡೆಯಲಿದೆ. ಇದನ್ನು ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಸುಧೀರ್ ಶೆಟ್ಟಿ ಉದ್ಘಾಟಿಸಲಿದ್ದಾರೆ ಎಂದು ಕಾರ್ಯಕ್ರಮ ಆಯೋಜಕ ಸುದೇಶ್ ಭಂಡಾರಿ ಹೇಳಿದ್ದಾರೆ.


ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಆಗಸ್ಟ್ 31ರಂದು ಕಬಡ್ಡಿ ಪಂದ್ಯಾಟದ ಉದ್ಘಾಟನೆ ನಡೆಯಲಿದ್ದು ಇದನ್ನು ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ಡಿ. ವೇದವ್ಯಾಸ ಕಾಮತ್ ಉದ್ಘಾಟಿಸಲಿದ್ದಾರೆ ಎಂದು ಮಾಹಿತಿ ನೀಡಿದರು.


ಬಳಿಕ ಮಾತಾಡಿದ ಸಮಿತಿಯ ಗೌರವ ಸಲಹೆಗಾರ ವಿಶ್ವಾಸ್ ದಾಸ್ ಅವರು, ”ಕಳೆದ ವರ್ಷ ಸೀಸನ್ 1ರ ಕಬಡ್ಡಿ ಅತ್ಯಂತ ಯಶಸ್ವಿಯಾಗಿ ನಡೆದಿದ್ದು ಈ ವರ್ಷ ಗೌರವಾಧ್ಯಕ್ಷ ಪ್ರಕಾಶ್ ಕುಂಪಲ ಮಾರ್ಗದರ್ಶನದಲ್ಲಿ ಕಾರ್ಯಕ್ರಮ ಆಯೋಜಿಸುತ್ತಿದ್ದೇವೆ. ಕಬಡ್ಡಿ ಟೂರ್ನಮೆಂಟ್ ಜೊತೆಗೆ ಈ ಬಾರಿ ಆಹಾರೋತ್ಸವ ಮತ್ತು ವಿನೋದ ಮೇಳವನ್ನು ಕೂಡ ಆಯೋಜಿಸಿದ್ದೇವೆ. ಜೊತೆಗೆ ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಅವರಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ. ಡಾ.ಸದಾನಂದ ಶೆಟ್ಟಿ, ಕನ್ಯಾನ ಸದಾಶಿವ ಶೆಟ್ಟಿ ಹಾಗೂ ಸದಾಶಿವ ಉಳ್ಳಾಲ ಪಾಲ್ಗೊಳ್ಳಲಿದ್ದಾರೆ. ಬಹುಮಾನ ವಿತರಣೆಯನ್ನು “ಶೆಫ್ ಟಾಕ್ ಫುಡ್ & ಹಾಸ್ಪಿಟಾಲಿಟಿ ಸರ್ವಿಸಸ್”ನ ಮ್ಯಾನೇಜಿಂಗ್ ಡೈರೆಕ್ಟರ್ ಗೋವಿಂದ ಬಿ. ಪೂಜಾರಿ ನೆರವೇರಿಸಲಿದ್ದಾರೆ ಎಂದರು.

Join Whatsapp
Exit mobile version