ಜೂನ್ 24 ರಂದು 18ನೇ ಲೋಕಸಭೆಯ ಅಧಿವೇಶನ ಆರಂಭ

Prasthutha|

ನವದೆಹಲಿ: 18ನೇ ಲೋಕಸಭೆಯ ಮೊದಲ ಅಧಿವೇಶನ ಜೂನ್ 24ರಿಂದ ಜುಲೈ 3ರವರೆಗೆ ಎಂಟು ದಿನಗಳ ಕಾಲ ನಡೆಯಲಿದೆ ಎಂದು ಸಂಶದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಹೇಳಿದ್ದಾರೆ.

- Advertisement -


ದೇಶದ ಪ್ರಧಾನಿಯಾಗಿ ನರೇಂದ್ರ ಮೋದಿಯವರು ಮೂರನೇ ಬಾರಿಗೆ ಪ್ರಮಾಣವಚನ ಸ್ವೀಕರಿಸಿದ್ದಾರೆ. 72 ಮಂದಿ ಸಂಸದರು ಸಚಿವರಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಈ ಹಿನ್ನೆಲೆಯಲ್ಲಿ 18 ಲೋಕಸಭೆಯ ಮೊದಲ ಅಧಿವೇಶನ ನಡೆಸಲು ನಿರ್ಧರಿಸಲಾಗಿದೆ. ಅಧಿವೇಶನವು ಜೂನ್ 24ರಿಂದ ಜುಲೈ 3ರವರೆಗೆ ನಡೆಯಲಿದ್ದು, ಎಲ್ಲಾ ಸಂಸದರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಜತೆಗೆ ಪ್ರಧಾನಿ ಮೋದಿ ಬಹುಮತ ಸಾಬೀತು ಮಾಡಲಿದ್ದಾರೆ.

Join Whatsapp