Home ಟಾಪ್ ಸುದ್ದಿಗಳು ಪರಿಸ್ಥಿತಿ ನನ್ನನ್ನು ಸ್ವತಂತ್ರವಾಗಿ ಸ್ಪರ್ಧಿಸುವಂತೆ ಮಾಡಿದೆ: ಉತ್ಪಲ್ ಪರಿಕ್ಕರ್

ಪರಿಸ್ಥಿತಿ ನನ್ನನ್ನು ಸ್ವತಂತ್ರವಾಗಿ ಸ್ಪರ್ಧಿಸುವಂತೆ ಮಾಡಿದೆ: ಉತ್ಪಲ್ ಪರಿಕ್ಕರ್

ಪಣಜಿ: ಪರಿಸ್ಥಿತಿ ನನ್ನನ್ನು ಸ್ವತಂತ್ರವಾಗಿ ಸ್ಪರ್ಧಿಸುವಂತೆ ಮಾಡಿದೆ  ಎಂದು ಮಾಜಿ ಮುಖ್ಯಮಂತ್ರಿ ದಿವಂಗತ ಮನೋಹರ್ ಪರಿಕ್ಕರ್ ಅವರ ಪುತ್ರ ಉತ್ಪಲ್ ಪರಿಕ್ಕರ್ ಹೇಳಿದ್ದಾರೆ. 

ಈ ಬಗ್ಗೆ ಮಾತನಾಡಿದ ಅವರು, ಪಣಜಿಯಲ್ಲಿ ಪ್ರತಿಯೊಬ್ಬರನ್ನೂ ಭೇಟಿ ಮಾಡಲು ಪ್ರಯತ್ನಿಸುತ್ತೇನೆ.  ಒಳ್ಳೆಯ ಅಭ್ಯರ್ಥಿ ಆಯ್ಕೆ ಮಾಡುವುದನ್ನು ಜನರಿಗೆ ಬಿಡುತ್ತೇನೆ ಎಂದು ತಿಳಿಸಿದರು.

ಪಣಜಿ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಸಿಗದ ಕಾರಣ ಕಳೆದ ವಾರ ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ಉತ್ಪಲ್ ಪರಿಕ್ಕರ್ ರಾಜೀನಾಮೆ ಸಲ್ಲಿಸಿದ್ದರು. ಬಿಜೆಪಿ ಟಿಕೆಟ್ ನಿರಾಕರಣೆ ನಂತರ, ಗೋವಾ ವಿಧಾನಸಭಾ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಅವರು ನಿರ್ಧರಿಸಿದರು.

Join Whatsapp
Exit mobile version