ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ

Prasthutha|

ಬೆಂಗಳೂರು: ನಾಳೆಯಿಂದ ಸೆ.3ರವರೆಗೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ನಡೆಸಲು ಪದವಿಪೂರ್ವ ಪರೀಕ್ಷಾ ಮಂಡಳಿ ಸಿದ್ದತೆ ಮಾಡಿಕೊಂಡಿದೆ. ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಸುಸೂತ್ರವಾಗಿ ನಡೆಸಲು ಎಲ್ಲ ಅಗತ್ಯ ಮುನ್ನೆಚ್ಚರಿಕೆಗಳನ್ನು ಕೂಡ ಈಗಾಗಲೇ ಕೈಗೊಳ್ಳಲಾಗಿದೆ.

- Advertisement -

ದ್ವಿತೀಯ ಪಿಯುಸಿ ಪರೀಕ್ಷಾ ಮಂಡಳಿ ಇತ್ತೀಚೆಗೆ ಪ್ರಕಟಿಸಿದ ಫಲಿತಾಂಶ ತೃಪ್ತಿಯಾಗದೆ ಪರೀಕ್ಷೆ ಬರೆಯಲು ಇಚ್ಛಿಸಿದ ಹಾಗೂ ಖಾಸಗಿ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಪರೀಕ್ಷೆ ನಡೆಸಲಾಗುತ್ತಿದೆ.


ಪರೀಕ್ಷೆ ಸಂದರ್ಭದಲ್ಲಿ ಕೋವಿಡ್ ಮಾರ್ಗಸೂಚಿ ಪಾಲನೆ ಮಾಡುವುದು ಕಡ್ಡಾಯವಾಗಿದೆ. 5546 ಕಾಲೇಜುಗಳ ಸುಮಾರು 18,414 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಇದರಲ್ಲಿ 816 ವಿದ್ಯಾರ್ಥಿಗಳು ಫಲಿತಾಂಶ ತಿರಸ್ಕರಿಸಿ ಪರೀಕ್ಷೆ ಬರೆಯಲಿದ್ದಾರೆ. 17598 ಖಾಸಗಿ ವಿದ್ಯಾರ್ಥಿಗಳು ಬರೆಯಲಿದ್ದಾರೆ. ರಾಜ್ಯದ 187 ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ನಡೆಯಲ್ಲಿದ್ದು, ಒಂದು ವೇಳೆ ಕೋವಿಡ್ ಸೋಂಕು ಕಂಡುಬಂದರೆ ಕೂಡಲೇ ವಿದ್ಯಾರ್ಥಿಗಳು ಜಿಲ್ಲಾಧಿಕಾರಿಗಳಿಗೆ ಮಾಹಿತಿ ನೀಡಬೇಕು. ಕೋವಿಡ್ ಸೋಂಕಿತರಿಗೂ ಪ್ರತ್ಯೇಕವಾಗಿ ಪರೀಕ್ಷೆ ಬರೆಯಲು ಅವಕಾಶವಿದೆ.

- Advertisement -


ಹೊರ ರಾಜ್ಯಗಳಿಂದ ಬರುವ ವಿದ್ಯಾರ್ಥಿಗಳು ಆರ್ ಟಿಪಿಸಿಆರ್ ನೆಗೆಟಿವ್ ವರದಿ ತರುವುದು ಕಡ್ಡಾಯವಾಗಿದೆ. ಕೇರಳ ಗಡಿ ಜಿಲ್ಲೆ ಗಳಿಂದ ಬರುವ ವಿದ್ಯಾರ್ಥಿಗಳಿಗೂ ಕೂಡ ಆರ್ ಟಿಪಿಸಿಆರ್ ಟೆಸ್ಟ್ ಕಡ್ಡಾಯ ಮಾಡಲಾಗಿದೆ.



Join Whatsapp