Home ಟಾಪ್ ಸುದ್ದಿಗಳು ರಾಜ್ಯ ಸರ್ಕಾರಕ್ಕೆ ಬಿಗ್ ಶಾಕ್! ಕಾಮಗಾರಿ ಸ್ಥಗಿತಕ್ಕೆ ರಾಜ್ಯ ಗುತ್ತಿಗೆದಾರರ ಸಂಘ ಚಿಂತನೆ

ರಾಜ್ಯ ಸರ್ಕಾರಕ್ಕೆ ಬಿಗ್ ಶಾಕ್! ಕಾಮಗಾರಿ ಸ್ಥಗಿತಕ್ಕೆ ರಾಜ್ಯ ಗುತ್ತಿಗೆದಾರರ ಸಂಘ ಚಿಂತನೆ

ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ಧ ರಾಜ್ಯ ಗುತ್ತಿಗೆದಾರರ ಸಂಘ ಸಮರ ಸಾರಲು ಮುಂದಾಗಿದೆ. ಹೌದು, ಕಾಮಗಾರಿ ಬಿಲ್ ಬಾಕಿ ಇರಿಸಿದ ಕಾಂಗ್ರೆಸ್ ಸರ್ಕಾರಕ್ಕೆ ಶಾಕ್ ನೀಡಲು ಕಾಮಗಾರಿ ಸ್ಥಗಿತಕ್ಕೆ ಚಿಂತನೆ ನಡೆಸಿದೆ.

ಈಗಾಗಲೇ ಬಿಬಿಎಂಪಿ ಗುತ್ತಿಗೆದಾರರ ಸಂಘ ಸಚಿವರ ವಿರುದ್ಧ ಕಮಿಷನ್​​ ಆರೋಪ ಮಾಡಿದೆ. ಇದರ ಮಧ್ಯೆ ಇದೀಗ ರಾಜ್ಯ ಗುತ್ತಿಗೆದಾರರ ಸಂಘವೂ ಸರ್ಕಾರಕ್ಕೆ ಶಾಕ್ ಕೊಡಲು ಮುಂದಾಗಿದ್ದು, ಈ ಕುರಿತು ‘ ಬಾಕಿ ಬಿಲ್ ಬಿಡುಗಡೆ ಮಾಡದಿದ್ದರೆ ಕಾಮಗಾರಿ ಪೂರ್ಣ ಮಾಡಲು ಕಷ್ಟವಾಗುತ್ತೆ ಎಂದು ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಅವರು ಕಾಮಗಾರಿ ನಿಲ್ಲಿಸುವ ಬಗ್ಗೆ ಪರೋಕ್ಷವಾಗಿ ಸುಳಿವು ನೀಡಿದ್ದಾರೆ.

ಬಾಕಿ ಹಣ ಬಿಡುಗಡೆ ಮಾಡದಿದ್ದರೆ ಕೆಲಸ ನಿಲ್ಲಿಸುವುದು ಅನಿವಾರ್ಯ

ಹೌದು, ಸರ್ಕಾರವು 7ಕ್ಕೂ ಹೆಚ್ಚು ಇಲಾಖೆಗಳಿಂದ 25 ಸಾವಿರ ಕೋಟಿಗೂ ಹೆಚ್ಚು ಬಿಲ್ ಬಾಕಿ ಉಳಿಸಿಕೊಂಡಿದ್ದು, ಬಾಕಿ ಹಣ ಬಿಡುಗಡೆ ಮಾಡದಿದ್ದರೆ ಕೆಲಸ ನಿಲ್ಲಿಸುವುದು ಅನಿವಾರ್ಯವಾಗಲಿದೆ. ಈ ಹಿನ್ನಲೆ ಆಗಸ್ಟ್​ 31ರೊಳಗೆ ಸರ್ಕಾರ ಬಾಕಿ ಬಿಲ್ ಬಿಡುಗಡೆ ಮಾಡದಿದ್ದರೆ ಸಭೆ ನಡೆಸಲಿದ್ದು, 61 ವಿವಿಧ ಗುತ್ತಿಗೆದಾರರ ಸಂಘದ ಪದಾಧಿಕಾರಿಗಳು ಸಭೆಯಲ್ಲಿ ಭಾಗಿಯಾಗಲಿದ್ದಾರೆ ಎಂದು ಕೆಂಪಣ್ಣ ಹೇಳಿದ್ದಾರೆ. ಇನ್ನು ಗುತ್ತಿಗೆದಾರರ ಸಂಘ ಈಗಾಗಲೇ ಬಾಕಿ ಬಿಲ್ ಕ್ಲಿಯರ್ ಮಾಡಲು ಸಂಬಂಧಪಟ್ಟ ಇಲಾಖೆ ಸಚಿವರಿಗೂ ಸೇರಿ ಸಿಎಂ, ಡಿಸಿಎಂಗೆ ಮನವಿ ಸಲ್ಲಿಸಿದರೂ, ಪ್ರಯೋಜನ ಆಗಿಲ್ಲ.

Join Whatsapp
Exit mobile version