ಸಂಘಪರಿವಾರ ಕಾರ್ಯಕರ್ತರ ಮೇಲಿನ ಕೇಸ್ ವಾಪಸ್ ಗೆ ರಾಜ್ಯ ಸರ್ಕಾರ ನಿರ್ಧಾರ

Prasthutha|

ಬೆಂಗಳೂರು: ಬಿಜೆಪಿ ಹಾಗೂ ಸಂಘಪರಿವಾರದ ಕಾರ್ಯಕರ್ತರ ಮೇಲಿನ ಕೇಸುಗಳನ್ನು ವಾಪಸ್ ಪಡೆಯಲು ಸರ್ಕಾರ ನಿರ್ಧಾರಿಸಿದೆ ಎಂದು ತಿಳಿದು ಬಂದಿದೆ.

- Advertisement -


ಬಿಜೆಪಿ ಮತ್ತು ಸಂಘಪರಿವಾರದ ಕಾರ್ಯಕರ್ತರ ಆಕ್ರೋಶ ತಣ್ಣಗಾಗಿಸಲು ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದೆ ಎನ್ನಲಾಗಿದೆ.


ಸಂಪುಟ ಸಭೆ ಬಳಿಕ ಮಾತನಾಡಿದ ಸಚಿವ ಮಾಧುಸ್ವಾಮಿ, 2019ರಿಂದ ದಾಖಲಾಗಿರುವ ಕೇಸ್ ಗಳನ್ನು ವಾಪಸ್ ಪಡೆಯಲು ಸರ್ಕಾರಕ್ಕೆ ಸಂಪುಟ ಉಪಸಮಿತಿಯಿಂದ ಶಿಫಾರಸು ಮಾಡುತ್ತೇವೆ. ಆದರೆ ವೈಯಕ್ತಿಕ ವಿಚಾರಕ್ಕಾಗಿ ಮಾಡಿದ ಕೊಲೆ, ಹೆಚ್ಚು ಸಾರ್ವಜನಿಕ ಆಸ್ತಿ ಹಾನಿ ಮಾಡಿರುವ ಪ್ರಕರಣಗಳನ್ನು ಇದಕ್ಕೆ ಪರಿಗಣಿಸಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.



Join Whatsapp