ಕೊಡಗನ್ನು ಮರೆತ ರಾಜ್ಯ ಸರ್ಕಾರ; ಕಾಂಗ್ರೆಸ್ ನ ಆರೋಪ ಸತ್ಯಕ್ಕೆ ದೂರ: ಬಿ.ಸಿ.ನಾಗೇಶ್

Prasthutha|

ಮಡಿಕೇರಿ: ಸರ್ಕಾರ ಕೊಡಗನ್ನು‌‌‌ ಮರೆತಿದೆ ಎನ್ನುವ ಕಾಂಗ್ರೆಸ್ ಆರೋಪ ಸತ್ಯಕ್ಕೆ ದೂರವಾಗಿದ್ದು,  ದೀರ್ಘ ಕಾಲ‌ ಅಧಿಕಾರದಲ್ಲಿದ್ದ ಕಾಂಗ್ರೆಸ್ ಗೆ ಪ್ರತಿಪಕ್ಷವಾಗಿ ಹೇಗೆ ವರ್ತಿಸಬೇಕು ಎನ್ನುವುದೇ ಗೊತ್ತಿಲ್ಲ ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.

- Advertisement -

ಸುದ್ದಿಗಾರರ ಜೊತೆ ಮಾತನಾಡಿದ ಅವರು, ಪ್ರಕೃತಿ ವಿಕೋಪದಂತಹ ಸಂದರ್ಭದಲ್ಲಿ ಪ್ರತಿಪಕ್ಷಗಳು ರಾಜಕೀಯ ಮಾಡಬಾರದು. 10 ದಿನಗಳ ಹಿಂದೆಯಷ್ಟೆ ಬಂದು ಮಳೆಗೆ ತೆಗೆದು ಕೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳನ್ನು ಸೂಚಿಸಿದ್ದೆ. ಕಂದಾಯ ಸಚಿವ ಆರ್.ಅಶೋಕ್ ಸಹ ಇತ್ತೀಚೆಗಷ್ಟೇ ಬಂದು ಪರಿಶೀಲನೆ ನಡೆಸಿದ್ದರು ಎಂದು ಸುದ್ದಿಗಾರರಿಗೆ ತಿಳಿಸಿದರು.

ಗ್ರಾಮ ಪಂಚಾಯತಿಯಿಂದ ಜಿಲ್ಲಾ ಪಂಚಾಯಿತಿವರೆಗೆ ಕಾರ್ಯಪಡೆ ರಚಿಸಲಾಗಿದೆ. 2018 ರ ದುರಂತದ ವೇಳೆ ನಡೆಸಿದ ಅದೇ  ಮಾದರಿಯಲ್ಲಿ ಪರಿಹಾರ ಕಾರ್ಯಾಚರಣೆ ನಡೆಸಲಾಗಿದೆ. ಮನೆ ಹಾನಿಯಾದವರಿಗೆ ಪರಿಹಾರ ವಿತರಿಸಲಾಗಿದೆ ಎಂದರು.

- Advertisement -

ಶಾಸಕ ಕೆ.ಜಿ.ಬೋಪಯ್ಯ ,ಪಶ್ಚಿಮ ಘಟ್ಟಗಳ ಕಾರ್ಯಪಡೆ ಅಧ್ಯಕ್ಷ ‌ರವಿ ಕುಶಾಲಪ್ಪ ಉಪಸ್ಥಿತರಿದ್ದರು.

Join Whatsapp