Home ಟಾಪ್ ಸುದ್ದಿಗಳು ACB ರದ್ದುಗೊಳಿಸಿದ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ ರಾಜ್ಯ ಸರ್ಕಾರ

ACB ರದ್ದುಗೊಳಿಸಿದ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ ರಾಜ್ಯ ಸರ್ಕಾರ

ಬೆಂಗಳೂರು: ಭ್ರಷ್ಟಾಚಾರ ನಿಗ್ರಹ ದಳವನ್ನು (ಎಸಿಬಿ) ರದ್ದುಗೊಳಿಸಿರುವ ಕರ್ನಾಟಕ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಕರ್ನಾಟಕ ಸರ್ಕಾರ ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ.


ಪ್ರಕರಣವನ್ನು ಪಟ್ಟಿ ಮಾಡುವುದಾಗಿ ಸಿಜೆಐ ಎನ್ ವಿ. ರಮಣ ತಿಳಿಸಿದ್ದು, ಒಂದೆರಡು ದಿನಗಳಲ್ಲಿ ವಿಚಾರಣೆಗೆ ಬರಲಿದೆ.
ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ಅಸ್ತಿತ್ವಕ್ಕೆ ಬಂದಿದ್ದ ಎಸಿಬಿ ವಿರುದ್ಧ ಬಿಜೆಪಿ ಹಿಂದಿನಿಂದಲೂ ವಿರೋಧಿಸಿಕೊಂಡು ಬಂದಿತ್ತು. ಮಾತ್ರವಲ್ಲ ಬಿಜೆಪಿ ಅಧಿಕಾರಕ್ಕೆ ಬಂದ ತಕ್ಷಣ ಎಸಿಬಿ ರದ್ದು ಮಾಡುವುದಾಗಿ ಭರವಸೆ ನೀಡಿತ್ತು. ಮೂರು ವರ್ಷ ಕಳೆದರೂ ಬಿಜೆಪಿ ಈ ಸಂಸ್ಥೆಯನ್ನು ರದ್ದು ಮಾಡಿರಲಿಲ್ಲ. ಕೊನೆಗೆ ಹೈಕೋರ್ಟ್ ಎಸಿಬಿ ರದ್ದುಪಡಿಸಿ ಇತ್ತೀಚೆಗೆ ಆದೇಶ ನೀಡಿತ್ತು. ಆದರೆ ಇದೀಗ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಬಿಜೆಪಿ ಸರ್ಕಾರ ಸುಪ್ರೀಂಕೋರ್ಟ್ ಮೆಟ್ಟಿಲೇರಿರುವುದು ಸಾರ್ವಜನಿಕವಾಗಿ ಚರ್ಚೆಗೆ ಗುರಿಯಾಗಿದೆ.

Join Whatsapp
Exit mobile version