ಗುಜರಾತ್ ಗೇಮ್ ಝೋನ್ ನಲ್ಲಿ ಅಗ್ನಿ ದುರಂತ ಬೆನ್ನಲ್ಲೇ ಎಚ್ಚೆತ್ತ ರಾಜ್ಯ ಸರ್ಕಾರ

Prasthutha|

ಬೆಂಗಳೂರು: ಗುಜರಾತ್ ನಲ್ಲಿ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ 33 ಜನರು ಮೃತಪಟ್ಟಿದ್ದಾರೆ. ರಾಜ್ ಕೋಟ್ ನ ಟಿಆರ್ ಪಿ ಗೇಮಿಂಗ್ ಝೋನ್ ನಲ್ಲಿ ಏಕಾಏಕಿ ಬೆಂಕಿ ಹೊತ್ತಿಕೊಂಡು 9 ಮಕ್ಕಳು ಮತ್ತು ಮಹಿಳೆಯರು ಸೇರಿದಂತೆ 33 ಜನ ಸಜೀವ ದಹನವಾಗಿದ್ದಾರೆ. ಸದ್ಯ ಈ ಘಟನೆ ಬೆನ್ನಲ್ಲೇ ಕರ್ನಾಟಕ ರಾಜ್ಯ ಸರ್ಕಾರ ಎಚ್ಚೆತ್ತಿದ್ದು, ಬೆಂಗಳೂರಿನ ಮಾಲ್ ಮತ್ತು ಗೇಮಿಂಗ್ ಝೋನ್ ಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ಬಿಬಿಎಂಪಿ ಮುಖ್ಯ ಆಯುಕ್ತರಿಗೆ ಡಿಸಿಎಂ ಡಿಕೆ ಶಿವಕುಮಾರ್ ಖಡಕ್ ಸೂಚನೆ ನೀಡಿದ್ದಾರೆ.

- Advertisement -


ಈ ಕುರಿತಾಗಿ ಪತ್ರ ಬರೆದಿರುವ ಡಿಕೆ ಶಿವಕುಮಾರ್, ಬೆಂಗಳೂರಿನಾದ್ಯಂತ ಶಾಪಿಂಗ್ ಮಾಲ್ ಗಳು, ಗೇಮಿಂಗ್ ಮತ್ತು ಸಾಹಸ ವಲಯಗಳಂತಹ ಹೆಚ್ಚಾಗಿ ಜನದಟ್ಟಣೆ ಇರುವ ಮನರಂಜನಾ ಸ್ಥಳಗಳಲ್ಲಿ ಅಹಿತಕರ ಬೆಂಕಿ ಅನಾಹುತಗಳನ್ನು ತಡೆಗಟ್ಟಲು ಸೂಕ್ತವಾದ ಸುರಕ್ಷತಾ ಕ್ರಮಗಳು ಮತ್ತು ಮುನ್ನೆಚ್ಚರಿಕೆಗಳ ಅನುಸರಣೆ ಅತ್ಯಂತ ಮಹತ್ವದ್ದಾಗಿದೆ.


ಅಗ್ನಿ ಅವಘಡಗಳನ್ನು ತಪ್ಪಿಸುವುದಕ್ಕಾಗಿ ನಿಯಮಿತ ತಪಾಸಣೆಗಳನ್ನು ಕಡ್ಡಾಯವಾಗಿ ಮಾಡುವುದರೊಂದಿಗೆ, ನಗರದಾದ್ಯಂತ ಮನರಂಜನಾ ಸ್ಥಳಗಳಲ್ಲಿ ಸುರಕ್ಷಿತ ಕ್ರಮಗಳನ್ನು ತ್ವರಿತವಾಗಿ ಅಳವಡಿಸಲು ಸೂಚನೆ ನೀಡಿದ್ದಾರೆ.

- Advertisement -

Join Whatsapp