ರಾಜ್ಯದಲ್ಲಿ ಇನ್ನೂ 4 ದಿನ ಮಳೆ ಸಾಧ್ಯತೆ

Prasthutha|

ಬೆಂಗಳೂರು: ರಾಜ್ಯದಲ್ಲಿ ಇನ್ನೂ ನಾಲ್ಕು ದಿನ ಮಳೆಯಾಗುವ ಸಾಧ್ಯತೆಯಿದೆ ಇದು ಎಂದು ಹವಾಮಾನ ಇಲಾಖೆ ತಿಳಿಸಿದೆ.

- Advertisement -

ಏಪ್ರಿಲ್ 20ರಿಂದ ರಾಜ್ಯದ ಉತ್ತರ ಒಳನಾಡು, ದಕ್ಷಿಣ ಒಳನಾಡು ಮತ್ತು ಕರಾವಳಿ ಭಾಗದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಕಳೆದ ಒಂದು ವಾರದಿಂದ ಗುಡುಗು-ಮಿಂಚು ಸಹಿತ ಉತ್ತಮ ಮಳೆಯಾಗುತ್ತಿದೆ. ಸತತ ಮಳೆ ಮತ್ತು ಗಾಳಿಯಿಂದಾಗಿ ಬೆಂಗಳೂರು ನಗರದಲ್ಲಿ ಸಾಕಷ್ಟು ಮರಗಳು ಧರೆಗೆ ಉರುಳಿವೆ.

- Advertisement -

ಬೇಸಿಗೆ ಮಳೆಯಲ್ಲಿ ಸಿಡಿಲು ಬಡಿಯುವ ಅಪಾಯವೂ ಹೆಚ್ಚಿದ್ದು, ರಾಜ್ಯದಲ್ಲಿ ಈ ಬಾರಿ ಸಿಡಿಲು ಬಡಿದು ಐವರು ಮೃತಪಟ್ಟಿದ್ದಾರೆ.

Join Whatsapp