ವಿಶ್ವದಾದ್ಯಂತ ಕೆಲವು ದೇಶಗಳಲ್ಲಿ ಕೋವಿಡ್ ಪ್ರಕರಣಗಳು ದಿಢೀರ್ ಹೆಚ್ಚಾಗುತ್ತಿರುವುದು ನಮಗೆ ಎಚ್ಚರಿಕೆಯ ಗಂಟೆ: ಡಾ.ಸುಧಾಕರ್

Prasthutha|

ಬೆಂಗಳೂರು: ಕೋವಿಡ್ ವಿರುದ್ಧ ಹೋರಾಡಲು ಉತ್ತಮ ಮಾರ್ಗವೆಂದರೆ ಕೋವಿಡ್ ಸೋಂಕು ಬರದಂತೆ ತಡೆಯುವುದಾಗಿದೆ. ಇದಕ್ಕಾಗಿ ನಾವು ಕೋವಿಡ್ ವಿರುದ್ಧದ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಲು ಮರೆಯಬಾರದು. ಲಸಿಕೆ ಪಡೆಯಿರಿ, ಸುರಕ್ಷಿತವಾಗಿರಿ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

- Advertisement -

ವಿಶ್ವದಾದ್ಯಂತ ಕೆಲವು ದೇಶಗಳಲ್ಲಿ ಕೋವಿಡ್ ಪ್ರಕರಣಗಳು ದಿಢೀರ್ ಹೆಚ್ಚಾಗುತ್ತಿರುವುದು ನಮಗೆ ಎಚ್ಚರಿಕೆಯ ಗಂಟೆ. ರಾಜ್ಯದಲ್ಲಿ ಈವರೆಗೂ ಕೇವಲ 20% ಜನರು ಮಾತ್ರ ಮುನ್ನೆಚ್ಚರಿಕೆ ಡೋಸ್ ಲಸಿಕೆ ಪಡೆದುಕೊಂಡಿದ್ದು, ಎಲ್ಲರೂ ತಪ್ಪದೇ ಮುನ್ನೆಚ್ಚರಿಕೆ ಡೋಸ್ ಲಸಿಕೆ ಪಡೆದುಕೊಂಡು ಈ ಹೋರಾಟದಲ್ಲಿ ಸರ್ಕಾರದ ಜೊತೆ ಕೈಜೋಡಿಸಬೇಕಾಗಿ ಮನವಿ ಮಾಡುತ್ತೇನೆ ಎಂದು ಹೇಳಿದರು.

Join Whatsapp
Exit mobile version