ಕೋವಿಡ್ ನಂತರದ ರೋಗಗಳಿಂದ ಸಾವು ಸಂಭವಿಸಿದರೆ ಅದನ್ನು ಕೊರೋನಾ ಸಾವೆಂದು ಪರಿಗಣಿಸುವಂತೆ ಸುಪ್ರೀಂ ಆದೇಶ

Prasthutha|

ಹೊಸದಿಲ್ಲಿ: ದೇಶದಲ್ಲಿ ಕೋವಿಡ್ ಸಾವಿನ ಬಗ್ಗೆ ಸುಪ್ರೀಂ ಕೋರ್ಟ್ ಹೊಸ ಆದೇಶ ಹೊರಡಿಸಿದ್ದು, ಕೋವಿಡ್ ಸೋಂಕಿನಿಂದ ಗುಣಮುಖರಾಗಿದ್ದರೂ ನಂತರ ಬಂದ ಬೇರೆ ಕಾಯಿಲೆಗಳಿಂದ ಉಂಟಾಗುವ ಸಾವುಗಳನ್ನು ಇನ್ನು ಮುಂದೆ ಕೋವಿಡ್ ಸಾವು ಎಂದು ಪರಿಗಣಿಸಬೇಕು ಎಂದು ಆದೇಶಿಸಿದೆ.

- Advertisement -

ಕೋವಿಡ್‌ನಿಂದ ಸಾವನ್ನಪ್ಪಿದ ವ್ಯಕ್ತಿಯ ಮರಣ ಪ್ರಮಾಣಪತ್ರದಲ್ಲಿ ಕೋವಿಡ್ ಸೋಂಕಿನಿಂದ ಸಾವನ್ನಪ್ಪಿರುವ ಬಗ್ಗೆ ನಮೂದಿಸಬೇಕು. ಮರಣ ಪ್ರಮಾಣಪತ್ರ ನೀಡುವ ಕಾರ್ಯವಿಧಾನಗಳನ್ನು ಸರಳಗೊಳಿಸುವಂತೆಯೂ ಕೇಂದ್ರ ಸರ್ಕಾರ ಮತ್ತು ಇತರ ಸರ್ಕಾರಿ ಸಂಸ್ಥೆಗಳಿಗೆ ಸುಪ್ರೀಂಕೋರ್ಟು ಆದೇಶಿಸಿದೆ.

ಸರ್ಕಾರಿ ಸಂಸ್ಥೆಗಳು ರೋಗಿಯು ಕೋವಿಡ್‌ನಿಂದಾಗಿ ಸಾವನ್ನಪ್ಪಿದ್ದಾನೆ ಎಂದು ತೋರಿಸುವ ದಾಖಲೆಗಳನ್ನು ನೀಡುವಲ್ಲಿ ವಿಫಲವಾಗಿದೆ ಎಂಬ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ಪರವಾಗಿ ನ್ಯಾಯಮೂರ್ತಿ ಅಶೋಕ್ ಭೂಷಣ್, ನ್ಯಾಯಮೂರ್ತಿ ಎಂ.ಆರ್ ಷಾ ಅವರನ್ನೊಳಗೊಂಡ ನ್ಯಾಯಪೀಠ ಈ ತೀರ್ಪು ನೀಡಿದೆ.

- Advertisement -

ಆದರೆ, ಕೋವಿಡ್ ದೃಢಪಟ್ಟ ಸಾವುಗಳನ್ನು ಮಾತ್ರ ಕೋವಿಡ್ ಸಾವು ಎಂದು ಪರಿಗಣಿಸಬಹುದು ಎಂದು ಕೇಂದ್ರ ಸರ್ಕಾರ ನ್ಯಾಯಾಲಯದಲ್ಲಿ ವಾದಿಸಿದೆ.

Join Whatsapp