ಸಿಎಎ ಕಾಯ್ದೆಯಡಿ 14 ಜನರಿಗೆ ಪ್ರಮಾಣಪತ್ರಗಳನ್ನು ವಿತರಿಸಿದ ಕೇಂದ್ರ ಗೃಹ ಸಚಿವಾಲಯ

Prasthutha|

ನವದೆಹಲಿ: ಸಿಎಎ ಕಾಯ್ದೆಯಡಿ 14 ಜನರಿಗೆ ಕೇಂದ್ರ ಗೃಹ ಸಚಿವಾಲಯ ಇಂದು ಪ್ರಮಾಣಪತ್ರಗಳನ್ನು ವಿತರಿಸಿದೆ.ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಗಾನಿಸ್ತಾನದಿಂದ ಭಾರತಕ್ಕೆ ಬಂದು ನೆಲೆಸಿರುವ ಜನರು ಇದರಲ್ಲಿ ಸೇರಿದ್ದಾರೆ. 14 ಜನರಿಗೆ ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಕುಮಾರ್ ಭಲ್ಲಾ ಅವರು ಪ್ರಮಾಣಪತ್ರಗಳನ್ನು ಹಸ್ತಾಂತರಿಸಿದ್ದಾರೆ.

- Advertisement -

ಪೌರತ್ವ ಪಡೆದವರಲ್ಲಿ ಹಿಂದೂಗಳು, ಸಿಖ್‌ಗಳು, ಜೈನರು, ಬೌದ್ಧರು, ಪಾರ್ಸಿಗಳು ಮತ್ತು ಕ್ರಿಶ್ಚಿಯನ್ನರು ಸೇರಿದ್ದಾರೆ.

ಕೇಂದ್ರ ಗೃಹ ಸಚಿವಾಲಯವ ಪೌರತ್ವ ನೋಂದಣಿಗಾಗಿ ವೆಬ್‌ಸೈಟ್‌ವೊಂದನ್ನು ಆರಂಭಿಸಿತ್ತು ಬಳಿಲ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಈಚೆಗೆ ಸಿಎಎ ಕುರಿತು ಅಧಿಸೂಚನೆ ಹೊರಡಿಸಿತ್ತು. ಈ ಕಾಯ್ದೆಯ ಅನ್ವಯ 2014 ಡಿಸೆಂಬರ್‌ 31ರ ಮೊದಲು ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಗಾನಿಸ್ತಾನದಿಂದ ಭಾರತಕ್ಕೆ ಬಂದು ನೆಲೆಸಿರುವ ಮುಸ್ಲಿಮೇತರರು ಪೌರತ್ವಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ.

- Advertisement -



Join Whatsapp