ಜಾಗತಿಕ ಮಟ್ಟದಲ್ಲಿ ಗರಿಷ್ಠ ಏರಿಕೆ ಕಂಡ ಕೊರೋನಾ : ಆತಂಕ ವ್ಯಕ್ತಪಡಿಸಿದ ವಿಶ್ವಸಂಸ್ಥೆ
Prasthutha: April 17, 2021

ಜಿನೇವಾ : ಜಾಗತಿಕ ಮಟ್ಟದಲ್ಲಿ ಕೊರೋನಾ ದಿನದಿಂದ ದಿನಕ್ಕೆ ಏರಿಕೆ ಕಂಡು ಬರುತ್ತಿದ್ದು, ಎರಡು ತಿಂಗಳಿನಿಂದ ಅತಿ ಹೆಚ್ಚು ಕೊರೋನಾ ಪ್ರಕರಣಗಳು ದಾಖಲಾಗುತ್ತಿವೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಆತಂಕ ವ್ಯಕ್ತಪಡಿಸಿದೆ.
ವಿಶೇಷ ಸಭೆಯೊಂದರಲ್ಲಿ ಮಾತನಾಡಿದ ಡಬ್ಲ್ಯುಎಚ್‌ಒ ಮಹಾನಿರ್ದೇಶಕ ಟೆಡ್ರೊಸ್ ಅಧಾನೊಮ್ ಘೆಬ್ರೆಯೆಸಸ್, ಕೋವಿಡ್ ಪ್ರಕರಣಗಳು ಮತ್ತು ಸಾವಿನ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದ್ದು, ಪರಿಸ್ಥಿತಿ ಚಿಂತಾಜನಕವಾಗಿದೆ. ಈ ಹಿಂದೆ ಸೋಂಕು ಹರಡುವುದನ್ನು ತಡೆಗಟ್ಟುವುದರಲ್ಲಿ ಯಶಸ್ವಿಯಾಗಿದ್ದ ದೇಶಗಳಲ್ಲೂ ಕೂಡ ಈ ಬಾರಿ ಸೋಂಕು ಹೆಚ್ಚಾಗಿದೆ ಎಂದು ತಿಳಿಸಿದ್ದಾರೆ .
ಜಾಗತಿಕವಾಗಿ 832 ದಶ ಲಕ್ಷ ಡೋಸ್ ಕೋವಿಡ್ ಲಸಿಕೆ ವಿವಿಧ ದೇಶಗಳಿಗೆ ಹೋಗಿವೆ. ಕಡಿಮೆ ಆದಾಯದ ದೇಶಗಳಿಗೆ ಶೇ.0.2 ರಷ್ಟು ಮಾತ್ರ ಲಸಿಕೆ ಹಂಚಿಕೆಯಾಗಿವೆ ಎಂದು ವರದಿಯಾಗಿದೆ.
