ಡಾ. ತಸ್ಲೀಮ್ ರಹ್ಮಾನಿ ಉಲ್ಲೇಖಿಸಿರುವ ಅಭಿಪ್ರಾಯ ಅಸಂಬದ್ಧ ಮತ್ತು ಅನಗತ್ಯ: ಇಲ್ಯಾಸ್ ಮುಹಮ್ಮದ್

Prasthutha|

ನವದೆಹಲಿ:  ಡಾ.ತಸ್ಲೀಮ್ ಅಹ್ಮದ್ ರಹ್ಮಾನಿ ಅವರು ಎಸ್ ಡಿಪಿಐಗೆ ನೀಡಿರುವ ರಾಜೀನಾಮೆಯನ್ನು ಅಂಗೀಕರಿಸಿರುವುದಾಗಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಇಲ್ಯಾಸ್ ಮುಹಮ್ಮದ್ ತುಂಬೆ ತಿಳಿಸಿದ್ದಾರೆ.

- Advertisement -

ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ಅವರು,  ಎಸ್‌ಡಿಪಿಐ ಪ್ರಾಥಮಿಕ ಸದಸ್ಯತ್ವಕ್ಕೆ ಡಾ.ತಸ್ಲೀಮ್ ಅಹ್ಮದ್ ರಹ್ಮಾನಿ ನೀಡಿರುವ ರಾಜೀನಾಮೆಯನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ಅಂಗೀಕರಿಸಿದ್ದಾರೆ. ಇತ್ತೀಚೆಗೆ ಚೆನ್ನೈನಲ್ಲಿ ನಡೆದ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಪಕ್ಷವು ಎನ್‌ ಜಿಒ ರೀತಿಯಲ್ಲಿ ಅಥವಾ ಕಾರ್ಪೊರೇಟ್ ಕಂಪೆನಿಯಂತೆ ಕೆಲಸ ಮಾಡುತ್ತಿದೆ ಎಂಬ ಕಾರಣವನ್ನು ಉಲ್ಲೇಖಿಸಿ ಅವರು ರಾಜೀನಾಮೆ ಸಲ್ಲಿಸಿದ್ದರು. ಸಭೆಯ ನಂತರ ರಾಷ್ಟ್ರೀಯ ಅಧ್ಯಕ್ಷರು ಅವರನ್ನು ಖುದ್ದಾಗಿ ಕರೆಸಿದ್ದರು ಮತ್ತು ಅವರ ಹೇಳಿಕೆಯನ್ನು ಸಮರ್ಥಿಸಲು ಪುರಾವೆಗಳು ಮತ್ತು ನಿದರ್ಶನಗಳನ್ನು ಕೇಳಿದರು. ಆದಾಗ್ಯೂ, ಅವರು ತಮ್ಮ ದೃಷ್ಟಿಕೋನವನ್ನು ಸಾಬೀತುಪಡಿಸಲು ಅಥವಾ ಸಮರ್ಥಿಸಲು ಅವರಿಂದ ಸಾಧ್ಯವಾಗಲಿಲ್ಲ. ಕಳೆದ ಮೂರು ವರ್ಷಗಳಿಂದ ಅವರು ಪಕ್ಷದ ರಾಷ್ಟ್ರೀಯ ಕಾರ್ಯದರ್ಶಿಯಾಗಿದ್ದರೂ ಪಕ್ಷದ ಯಾವುದೇ ಸಭೆಗಳಲ್ಲಿ ಈ ವಿಷಯವನ್ನು ಪ್ರಸ್ತಾಪಿಸಿಲ್ಲ ಅಥವಾ ನಮ್ಮೊಂದಿಗೆ ವೈಯಕ್ತಿಕವಾಗಿ ಚರ್ಚಿಸಿಲ್ಲ. ಹೀಗಾಗಿ ಅವರ ರಾಜೀನಾಮೆಯನ್ನು ರಾಷ್ಟ್ರೀಯ ಅಧ್ಯಕ್ಷರು ಅಂಗೀಕರಿಸಿದ್ದಾರೆ. ಡಾ. ತಸ್ಲೀಮ್ ರಹ್ಮಾನಿ ಅವರು ಉಲ್ಲೇಖಿಸಿದ ಕಾರಣವು ಅನಗತ್ಯ ಮತ್ತು ಅಸಂಬದ್ಧವಾಗಿದೆ ಎಂದು ಇಲ್ಯಾಸ್ ಮುಹಮ್ಮದ್ ತುಂಬೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



Join Whatsapp