Home ಟಾಪ್ ಸುದ್ದಿಗಳು ತರಗತಿಯಲ್ಲಿ ಮಕ್ಕಳು ಕುಳಿತಿರುವಾಗಲೇ ಶಾಲೆಯ ಗೋಡೆ ಕುಸಿತ..!

ತರಗತಿಯಲ್ಲಿ ಮಕ್ಕಳು ಕುಳಿತಿರುವಾಗಲೇ ಶಾಲೆಯ ಗೋಡೆ ಕುಸಿತ..!

ಗುಜರಾತ್: ಖಾಸಗಿ ಶಾಲೆಯೊಂದರ ಗೋಡೆ ಕುಸಿದು ಬಿದ್ದಿರುವ ಘಟನೆ ಗುಜರಾತ್ ನ ವಡೋದರಾದಲ್ಲಿ ಸಂಭವಿಸಿದೆ.


ಘಟನೆಗೆ ಸಂಬಂಧಿಸಿದ ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸದ್ಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ.


ಗೋಡೆ ಕುಸಿದ ಪರಿಣಾಮ ಓರ್ವ ವಿದ್ಯಾರ್ಥಿಗೆ ತೀವ್ರ ಗಾಯಗಳಾಗಿದ್ದು, ಹತ್ತಿರದ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ವಡೋದರದ ವಘೋಡಿಯಾ ರಸ್ತೆ ಸಮೀಪದ ಶ್ರೀ ನಾರಾಯಣ ಖಾಸಗಿ ಶಾಲೆಯ ಮೊದಲ ಮಹಡಿಯಲ್ಲಿದ್ದ ತರಗತಿಯ ಗೋಡೆ ಕುಸಿದಿದ್ದು, ಮಧ್ಯಾಹ್ನ 12:30 ರ ಸುಮಾರಿಗೆ ಈ ಘಟನೆ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

“ಮಧ್ಯಾಹ್ನ 12:30 ರ ಸುಮಾರಿಗೆ ಘಟನೆ ಸಂಭವಿಸಿದೆ. ದೊಡ್ಡ ಧ್ವನಿ ಬಂದಿತು, ನಂತರ ನಾವು ಸ್ಥಳಕ್ಕೆ ಧಾವಿಸಿದೆವು. ಒಬ್ಬ ವಿದ್ಯಾರ್ಥಿಗೆ ತಲೆಗೆ ಗಾಯವಾಯಿದೆ. ತಕ್ಷಣ ಬಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದ ವಿದ್ಯಾರ್ಥಿಗಳು ಸುರಕ್ಷಿತವಾಗಿದ್ದಾರೆ” ಎಂದು ಶಾಲಾ ಪ್ರಾಂಶುಪಾಲ ರೂಪಲ್ ಶಾ ಹೇಳಿದ್ದಾರೆ.

Join Whatsapp
Exit mobile version