Home ಟಾಪ್ ಸುದ್ದಿಗಳು ಇಂದಿನಿಂದ ದಕ್ಷಿಣ ಕನ್ನಡ ಸೇರಿದಂತೆ ರಾಜ್ಯದಲ್ಲಿ ಮಳೆಯ ಸೂಚನೆ ನೀಡಿದ ಹವಾಮಾನ ಇಲಾಖೆ

ಇಂದಿನಿಂದ ದಕ್ಷಿಣ ಕನ್ನಡ ಸೇರಿದಂತೆ ರಾಜ್ಯದಲ್ಲಿ ಮಳೆಯ ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ಮೇ 6 ರಿಂದ ಮೇ 10 ರವರೆಗೆ ರಾಜ್ಯದಲ್ಲಿ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಕರಾವಳಿ ಭಾಗದಲ್ಲಿ ಗುಡುಗು ಮಿಂಚಿನೊಂದಿಗೆ ಮಳೆಯಾಗಲಿದೆ. ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.ಹಳೇ ಮೈಸೂರು ಭಾಗದಲ್ಲಿ ಭಾರಿ ಮಳೆಯನ್ನು ನಿರೀಕ್ಷೆ ಮಾಡಲಾಗಿದೆ. ಹಲವು ಕಡೆಗಳಲ್ಲಿ ಶಾಖದ ಅಲೆ ಹೆಚ್ಚಿರಲಿದೆ ಎಂದು ಹವಾಮಾನ‌ ಇಲಾಖೆ ಹೇಳಿದೆ.

ಮೇ 6ರಂದು, ಸೋಮವಾರ ಮೈಸೂರು, ಮಂಡ್ಯ, ಕೋಲಾರ, ತುಮಕೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಹುಬ್ಬಳ್ಳಿ, ಬೆಳಗಾವಿ, ದಕ್ಷಿಣ ಕನ್ನಡ, ಚಾಮರಾಜನಗರ, ದಾವಣಗರೆ ಜಿಲ್ಲೆಗಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಮೇ 7ರಿಂದ 9ರವರೆಗೆ ಮಳೆ ಬಿರುಸು ಪಡೆಯಲಿದ್ದು ಶಿವಮೊಗ್ಗ, ದಾವಣಗೆರೆ, ಬೀದರ್, ಕಲಬುರ್ಗಿ, ಬಳ್ಳಾರಿ, ಮೈಸೂರು, ಚಾಮರಾಜನಗರ, ದಕ್ಷಿಣ ಕನ್ನಡ, ಕೋಲಾರ, ತುಮಕೂರು, ಮಂಡ್ಯ, ರಾಮನಗರ, ಚಿತ್ರದುರ್ಗ ಸೇರಿದಂತೆ ಬಹುತೇಕ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ.

ಮೇ 11ರವರೆಗೆ ರಾಜ್ಯದಲ್ಲಿ ಉತ್ತಮ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯಲ್ಲಿ ತಿಳಿಸಿದೆ.

.

Join Whatsapp
Exit mobile version