ಉಳ್ಳಾಲ | ಪತಿ ಮೃತರಾಗಿ ಎರಡೇ ಗಂಟೆಯಲ್ಲಿ ಪತ್ನಿಯ ಮರಣ!

Prasthutha: April 29, 2021

ನ್ಯುಮೋನಿಯಾದಿಂದ ಬಳಲುತ್ತಿದ್ದವರೊಬ್ಬರೊಬ್ಬರು ನಿನ್ನೆ ರಾತ್ರಿ ಮೃತಪಟ್ಟಿದ್ದು, ನಂತರ ಎರಡೇ ಗಂಟೆಯ ಅವಧಿಯಲ್ಲಿ ಅವರ ಪತ್ನಿಯೂ ಮೃತಪಟ್ಟಿರುವ ಕರುಣಾಜನಕ ಘಟನೆ ಉಳ್ಳಾಲದ ಮಾಸ್ತಿಕಟ್ಟೆ ಎಂಬಲ್ಲಿ ನಡೆದಿದೆ.

ಮೃತಪಟ್ಟವರನ್ನು ಉಳ್ಳಾಲದಲ್ಲಿ ಎಲ್ಲರಿಗೂ ಚಿರಪರಿಚಿತರಾಗಿ ಸದಾ ಹಸನ್ಮುಖಿಯಾಗಿದ್ದ ಸಮಾಜ ಸೇವಕ ನಝೀರ್ ಅಹ್ಮದ್ ಎಂದು ಗುರುತಿಸಲಾಗಿದೆ. ಅವರು ರಾತ್ರಿ ಒಂದು ಗಂಟೆಗೆ ಮೃತಪಟ್ಟಿದ್ದು, ಅವರ ಪತ್ನಿ ತಡರಾತ್ರಿ ಮೂರು ಗಂಟೆಯ ಹೊತ್ತಿಗೆ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಬೆಳಿಗ್ಗೆ ಘಟನೆ ತಿಳಿದು ಇಡೀ ಉಳ್ಳಾಲದ ಜನತೆ ಶೋಕ ಸಾಗರದಲ್ಲಿ ಮುಳುಗಿದೆ.

ವಿಕಲಾಂಗರಾಗಿದ್ದ ನಝೀರ್ ಅಹ್ಮದ್ ಸರಕಾರಿ ಮತ್ತು ಸರಕಾರೇತರ ಸೌಲಭ್ಯ ದಾಖಲೆ ರಚಿಸುವಿಕೆ ಕೆಲಸ ಮಾಡುತ್ತಿದ್ದರು.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ

error: Content is protected !!