ರಾಜ್ಯದಲ್ಲಿ 2.53 ಲಕ್ಷ ಸರ್ಕಾರಿ ಹುದ್ದೆ ಖಾಲಿ ಇವೆ: ಸಿಎಂ ಬೊಮ್ಮಾಯಿ

Prasthutha|

ಬೆಂಗಳೂರು: ರಾಜ್ಯದಲ್ಲಿ 2,52,902 ಹುದ್ದೆಗಳು ಖಾಲಿ ಇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

- Advertisement -

ಸರ್ಕಾರದ 38 ಪ್ರಧಾನ ಇಲಾಖೆಗಳಿಗೆ 7,68,975 ಹುದ್ದೆಗಳು ಮಂಜೂರಾಗಿದ್ದು, ಈ ಪೈಕಿ 5,16,073 ಹುದ್ದೆಗಳು ಭರ್ತಿ ಆಗಿವೆ. 2,52,902 ಹುದ್ದೆಗಳು ಖಾಲಿ ಇವೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ವಿಧಾನ ಪರಿಷತ್‌ನಲ್ಲಿ ಜೆಡಿಎಸ್‌ನ ಕೆ.ಟಿ.ಶ್ರೀಕಂಠೇಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಸರ್ಕಾರದ 38 ಪ್ರಧಾನ ಇಲಾಖೆಗಳಿಗೆ 7,68,975 ಹುದ್ದೆಗಳು ಮಂಜೂರಾಗಿದ್ದು, ಈ ಪೈಕಿ 5,16,073 ಹುದ್ದೆಗಳು ಭರ್ತಿ ಆಗಿವೆ. 2,52,902 ಹುದ್ದೆಗಳು ಖಾಲಿ ಇವೆ. ಕೋವಿಡ್ ಪರಿಸ್ಥಿತಿ ನಡುವೆಯೂ, ಅಗತ್ಯ ಸೇವೆಗಳನ್ನು ನೀಡುವ ಶಿಕ್ಷಣ, ಪೊಲೀಸ್ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ನೇಮಕಾತಿಗೆ ನಿರ್ಬಂಧ ವಿಧಿಸಿಲ್ಲ. 15 ಸಾವಿರ ಸರ್ಕಾರಿ ಶಿಕ್ಷಕರ ನೇಮಕಾತಿಗೆ ಅನುಮತಿ ನೀಡಲಾಗಿದೆ’ ಎಂದರು.

Join Whatsapp