Home ಟಾಪ್ ಸುದ್ದಿಗಳು ರಾಜ್ಯದಲ್ಲಿ 49 ಸಾವಿರ ಅಪ್ರಾಪ್ತ ಗರ್ಭಿಣಿಯರಿದ್ದಾರೆ: ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ರಾಜ್ಯಾಧ್ಯಕ್ಷ

ರಾಜ್ಯದಲ್ಲಿ 49 ಸಾವಿರ ಅಪ್ರಾಪ್ತ ಗರ್ಭಿಣಿಯರಿದ್ದಾರೆ: ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ರಾಜ್ಯಾಧ್ಯಕ್ಷ

ಮಂಗಳೂರು : ರಾಜ್ಯದಲ್ಲಿ ಸುಮಾರು 49 ಸಾವಿರದಷ್ಟು ಮಂದಿ ಅಪ್ರಾಪ್ತೆಯರು ಗರ್ಭಿಣಿಯರಾಗಿದ್ದಾರೆ ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ನಾಗಣ್ಣ ಗೌಡ ಕಳವಳ ವ್ಯಕ್ತಪಡಿಸಿದ್ದಾರೆ.


ನಗರದಲ್ಲಿ ಮಾತನಾಡಿದ ಅವರು, ಈ ಸಂಖ್ಯೆ ಅತ್ಯಂತ ಆತಂಕಾರಿಯಾಗಿದೆ. ಮತ್ತೊಮ್ಮೆ ಡಿಹೆಚ್ಒ ಹಾಗೂ ಆಶಾ – ಅಂಗನವಾಡಿ ಕಾರ್ಯಕರ್ತೆಯರ ಮಟ್ಟದಲ್ಲಿ ರೀ ಸರ್ವೇ ಮಾಡಲಾಗುತ್ತದೆ. ಪರಿಶೀಲನೆ ಮಾಡುವ ಸಂದರ್ಭ ಅಪ್ರಾಪ್ತ ಗರ್ಭಿಣಿಯರಲ್ಲಿಯೇ ಕೂಲಂಕಷವಾಗಿ ಮಾಹಿತಿ ಪಡೆದು, ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು.


ಕಲ್ಯಾಣ ಕರ್ನಾಟಕ, ಮಂಡ್ಯ ಭಾಗದಲ್ಲಿ ಹೆಚ್ಚಿನ ಪ್ರಕರಣಗಳು ಲಭ್ಯವಾಗಿದೆ. ಹದಿನೆಂಟು ತುಂಬುವ ಮೊದಲೇ ವಿವಾಹ, ಅತ್ಯಾಚಾರ, ಪ್ರೀತಿಯ ನೆಪದಲ್ಲಿ ದೈಹಿಕ ಸಂಪರ್ಕ ಹೀಗೆ ಹಲವಾರು ರೀತಿಯಲ್ಲಿ ಅಪ್ರಾಪ್ತೆಯರು ಗರ್ಭಿಣಿಯರಾಗುತ್ತಿರುವ ಪ್ರಕರಣಗಳು ಬಯಲಾಗುತ್ತಿದೆ. ಇಂತಹ ಪ್ರಕರಣಗಳು ಬಹಳ ಸೂಕ್ಷ್ಮವಾಗಿದ್ದು, ಸಂತ್ರಸ್ತ ಬಾಲಕಿಯರಿಗೆ ಹೆಚ್ಚಿನ ಮಟ್ಟದ ಸಾಂತ್ವನದ ಅಗತ್ಯವಿದೆ ಎಂದು ಹೇಳಿದ್ದಾರೆ.

Join Whatsapp
Exit mobile version