ದಕ್ಷಿಣ ಕನ್ನಡ, ಉಡುಪಿ ಸೇರಿ ಐದು ಜಿಲ್ಲೆಗಳಲ್ಲಿ ಸದ್ಯಕ್ಕಿಲ್ಲ ಶಾಲೆ ಆರಂಭ

Prasthutha|

ಬೆಂಗಳೂರು: ರಾಜ್ಯದಲ್ಲಿ ಆಗಸ್ಟ್ 23 ಸೋಮವಾರದಿಂದ 9 ರಿಂದ 12 ನೇ ತರಗತಿಗಳಲ್ಲಿ ಭೌತಿಕ ಪಾಠ ಪ್ರಾರಂಭವಾಗಲಿದ್ದು, ಇದಕ್ಕಾಗಿ ಶಾಲಾ-ಕಾಲೇಜುಗಳಲ್ಲಿ  ಪೂರ್ಣ ಸಿದ್ಧತೆ ಮಾಡಿಕೊಳ್ಳಲಾಗಿದೆ.

- Advertisement -

ಶೇಕಡಾ 2 ಕ್ಕಿಂತ ಹೆಚ್ಚು ಪಾಸಿಟಿವಿಟಿ ರೇಟ್ ಇರುವ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡಪಿ, ಚಿಕ್ಕಮಗಳೂರು, ಕೊಡಗು, ಹಾಗೂ ಹಾಸನ ಜಿಲ್ಲೆಗಳಲ್ಲಿ ಸೋಮವಾರದಿಂದ ಶಾಲೆ ಆರಂಭ ಇರುವುದಿಲ್ಲ. ಕೇರಳ ಭಾಗದಲ್ಲಿ ಕೊರೊನಾ ಪ್ರಕರಣಗಳು ಏರಿಕೆ ಆಗಿರುವುದರಿಂದ ಕರ್ನಾಟಕದ ಗಡಿ ಜಿಲ್ಲೆಗಳಲ್ಲಿ ಕೊವಿಡ್ ಕೇಸ್​​ಗಳ ಸಂಖ್ಯೆ ಇಳಿಕೆಯಾಗಿಲ್ಲ. ಹೀಗಾಗಿ ಪಾಸಿಟಿವಿಟಿ ದರ ನಿಗದಿತ ಪ್ರಮಾಣಕ್ಕೆ ಇಳಿಕೆಯಾಗಿಲ್ಲ.  ಈ ಐದು ಜಿಲ್ಲೆಗಳಲ್ಲಿ ಸ್ಥಿತಿಗತಿ ಹೊಂದಿಕೊಂಡು ಶಾಲೆ ಪುನಾರಂಭ ಆಗಲಿದೆ.

ಪಾಸಿಟಿವಿಟಿ ದರ ಶೇಕಡ 2 ಕ್ಕಿಂತ ಕಡಿಮೆ ಇರುವ ಜಿಲ್ಲೆಗಳಲ್ಲಿ 9 ಮತ್ತು 10 ನೇ ತರಗತಿ ಹಾಗೂ ಪ್ರಥಮ, ದ್ವಿತೀಯ ಪಿಯುಸಿ ತರಗತಿಗಳನ್ನು ಆರಂಭಿಸಲು ಸರ್ಕಾರ ಮುಂದಾಗಿದೆ.

- Advertisement -

ಸೋಮವಾರದಿಂದ ಶುಕ್ರವಾರದವರೆಗೆ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1.30 ರವರೆಗೆ, ಶನಿವಾರ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 12.50 ರವರೆಗೆ ತರಗತಿಗಳು ನಡೆಯಲಿವೆ.

Join Whatsapp