ನವದೆಹಲಿ: ದೆಹಲಿಯ ಓಖ್ಲಾ ಪ್ರದೇಶದಲ್ಲಿ ಆಸ್ಪತ್ರೆಯನ್ನು ನಿರ್ಮಿಸದ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ವಿರುದ್ಧ ಅಸದುದ್ದೀನ್ ಉವೈಸಿ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿದ ಅವರು, ಯಾವುದೇ ಜಾತಿ ರಾಜಕಾರಣ ಮಾಡದೆ ಅಭಿವೃದ್ಧಿ ಕೆಲಸಗಳನ್ನು ಮಾಡುತ್ತಿರುವ ಮುಖ್ಯಮಂತ್ರಿಯವರ ಅವಧಿಯಲ್ಲಿ ಓಖ್ಲಾ ಆಸ್ಪತ್ರೆ ಸೌಲಭ್ಯಗಳ ಕೊರತೆಯಿಂದ ಬಳಲುತ್ತಿದೆ ಎಂದು ಕಿಡಿ ಕಾರಿದ್ದಾರೆ. ದೆಹಲಿಯಲ್ಲಿ ಅತ್ಯಂತ ಹೆಚ್ಚು ಮುಸ್ಲಿಂ ಜನಸಂಖ್ಯೆ ಇರುವ ಪ್ರದೇಶವಾಗಿದೆ ಓಖ್ಲಾ.
ಬಹುಪಾಲು ಮುಸ್ಲಿಮರು ಎಎಪಿಗೆ ಮತ ಹಾಕಿದ್ದಾರೆ. ಆಸ್ಪತ್ರೆ ಬಿಡಿ, ಜಂತರ್ ಮಂತರ್ ನಲ್ಲಿ ಮುಸ್ಲಿಮರ ಹತ್ಯಾಕಾಂಡವನ್ನು ಕೂಡ ಮುಖ್ಯಮಂತ್ರಿ ಖಂಡಿಸಿಲ್ಲ ಎಂದು ಉವೈಸಿ ಹೇಳಿದರು.