Home ಟಾಪ್ ಸುದ್ದಿಗಳು ಮೊದಲ ಹಂತದ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆಲ್ಲುವ ವರದಿ ಬಂದಿದೆ: ಸಿದ್ದರಾಮಯ್ಯ

ಮೊದಲ ಹಂತದ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆಲ್ಲುವ ವರದಿ ಬಂದಿದೆ: ಸಿದ್ದರಾಮಯ್ಯ

ಕಲಬುರಗಿ: ಶುಕ್ರವಾರ ಮೊದಲನೇ ಹಂತದ ಚುನಾವಣೆ ಮುಗಿದಿದೆ. ಅದರಲ್ಲಿ ಹೆಚ್ಚು ಸ್ಥಾನ ಗೆಲ್ಲುವ ವರದಿ ಬಂದಿದೆ ಎಂದು ಸಿಎಂ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು.


ಈ ಕುರಿತು ಕಲಬುರಗಿಯಲ್ಲಿ ಮಾತನಾಡಿದ ಅವರು, ಎಲ್ಲಾ ಅಭ್ಯರ್ಥಿ ಮತ್ತು ಮಂತ್ರಿಗಳ ಜೊತೆ ಮಾತನಾಡಿದ್ದೇನೆ. ನಮ್ಮ 5 ಗ್ಯಾರಂಟಿ ಜನರ ಮೇಲೆ ಹೆಚ್ಚು ಪರಿಣಾಮ ಬೀರಿದೆ. ಈ ಚುನಾವಣೆಯಲ್ಲಿ ಕೇಂದ್ರ ಸರ್ಕಾರದ ವೈಫಲ್ಯ ಹಾಗೂ ನಮ್ಮ ಸರ್ಕಾರದ ಸಾಧನೆ ಪ್ರಸ್ತಾಪ ಮಾಡಿದ್ದೇವೆ. ನರೇಂದ್ರ ಮೋದಿ ಈ ದೇಶದ ಪ್ರಧಾನಮಂತ್ರಿಯಾಗಿ ಸುಳ್ಳಿನ ಮಾರುಕಟ್ಟೆ ಮಾಡುತ್ತಿದ್ದಾರೆ. ಹಿಂದುಳಿದವರ ಮೀಸಲಾತಿ ಆರ್ಟಿಕಲ್ 15 ಮತ್ತು 16ರ ಪ್ರಕಾರ ಈ ಸಮಾಜದಲ್ಲಿ ಅವರಿಗೆ ಮೀಸಲಾತಿ ಕೊಡಬೇಕಾಗಿದೆ ಎಂದರು.


ಕೇಂದ್ರ ಸರ್ಕಾರದಿಂದ 3,400 ಕೋಟಿ ರೂ. ಬರ ಪರಿಹಾರ ಬಿಡುಗಡೆ ವಿಚಾರವಾಗಿ ಪ್ರತಿಕ್ರಿಯಿಸಿ, ನಾವು ಕೇಳಿದ್ದು 18,172 ಕೋಟಿ ರೂ. ಒಟ್ಟು 35 ಸಾವಿರ ಕೋಟಿ ಬೆಳೆ ನಷ್ಟವಾಗಿದೆ. 48 ಲಕ್ಷ ಹೆಕ್ಟೇರ್ ಬೆಳೆ ನಷ್ಟವಾಗಿದೆ. ಎನ್ಡಿಆರ್ಎಫ್ ನಿಯಮದ ಪ್ರಕಾರ 18 ಸಾವಿರ ಕೋಟಿ ರೂ. ಕೇಳಿದ್ದೆವು. ಆಗ ನಿರ್ಮಲಾ ಸಿತಾರಾಮನ್, ಅಮಿತ್ ಶಾ ಸುಳ್ಳು ಹೇಳಿದರು ಎಂದು ಆಕ್ರೋಶ ವ್ಯಕ್ತಪಡಿಸಿದರು.

Join Whatsapp
Exit mobile version