ಜಾತಿ ಆಧಾರದಲ್ಲಿ ಚುನಾವಣೆ ಗೆಲ್ಲುವ ಕಾಲ ಮುಗಿದಿದೆ: ಸತೀಶ್ ಜಾರಕಿಹೊಳಿ

Prasthutha|

ಬೆಳಗಾವಿ: ಚುನಾವಣೆಯಲ್ಲಿ ಸೋಲುತ್ತಾರೆ ಎಂದು ಗೊತ್ತಿದ್ದರೂ ಕೆಲವರಿಗೆ ಹಿರಿಯರು ಎಂಬ ಕಾರಣಕ್ಕೆ ಟಿಕೆಟ್ ನೀಡಲಾಗುತ್ತಿದೆ. ಗೆಲ್ಲುವ ಸಾಮರ್ಥ್ಯ ಇರುವವರಿಗೆ ಮಾತ್ರ ಟಿಕೆಟ್ ನೀಡಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.

- Advertisement -

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಂಬರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಗತ್ಯ ತಂತ್ರಗಾರಿಕೆಯನ್ನು ಮಾಡದಿದ್ದರೆ, ರಾಜ್ಯದಲ್ಲಿ ಚುನಾವಣೆ ಗೆಲ್ಲಲು ಸಾಧ್ಯವಾಗುವುದಿಲ್ಲ. ಜಾತಿ ಆಧಾರದಲ್ಲಿ ಚುನಾವಣೆ ಗೆಲ್ಲುವ ಕಾಲ ಮುಗಿದಿದೆ. ಯಾರು ಏನು ಕೆಲಸ ಮಾಡುತ್ತಿದ್ದಾರೆ ಎಂಬುವುದನ್ನು ಜನರು ನೋಡುತ್ತಿದ್ದಾರೆ. ಆದುದರಿಂದ, ಕಾಂಗ್ರೆಸ್ ಪಕ್ಷದಲ್ಲಿಯೂ ಕೆಲಸ ಮಾಡುವವರಿಗೆ, ಹೊಸಬರಿಗೆ ಅವಕಾಶಗಳನ್ನು ನೀಡಬೇಕು ಎಂದು ಹೇಳಿದರು.

ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅಷ್ಟೊಂದು ಕಡಿಮೆ ಸ್ಥಾನ ಬರಬಹುದು ಎಂದು ನಿರೀಕ್ಷೆ ಮಾಡಿರಲಿಲ್ಲ. ನಾವು ಯಾವ ಯಾವ ಕ್ಷೇತ್ರಗಳಲ್ಲಿ ಗೆಲ್ಲಬೇಕೋ ಅಂತಹ ಕಡೆ ಹೆಚ್ಚಿನ ಪ್ರಯತ್ನಗಳನ್ನು ಮಾಡಬೇಕು. ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಪಕ್ಷ ಸ್ಪಷ್ಟ ಬಹುಮತ ಪಡೆಯಲು ಅಲ್ಲಿನ ಬಿಜೆಪಿ ಸರಕಾರದ ಆಡಳಿತ ವಿರೋಧಿ ಅಲೆಯೇ ಕಾರಣ ಎಂದರು.

Join Whatsapp