ಸಮಾಜದಲ್ಲಿ ನೈತಿಕತೆ ಮೂಡಿಸುವ ಶಿಕ್ಷಣ ಅವಶ್ಯಕತೆ ಇದೆ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

Prasthutha|

- Advertisement -

ಹಾಸನ: ಇಂದು ಸಮಾಜದಲ್ಲಿ ನೈತಿಕತೆಯನ್ನು ಮೂಡಿಸುವ ಶಿಕ್ಷಣದ ಅವಶ್ಯಕತೆಯಿದೆ, ಆಧುನಿಕ ಜ್ಞಾನ, ರಾಷ್ಟ್ರದ ಏಕತೆ-ಸಮಗ್ರತೆ, ಸಮಾಜದಲ್ಲಿ ಸಮಾನತೆ ಮತ್ತು ಸೌಹಾರ್ದತೆಯೊಂದಿಗೆ ಸಂಸ್ಕೃತಿಯನ್ನು ಸಂರಕ್ಷಿಸುವ ಶಿಕ್ಷಣದ ಅಗತ್ಯವಿದೆ ಎಂದು ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹೇಳಿದ್ದಾರೆ.

ಹಾಸನದ ಸೇಂಟ್ ಜೋಸೆಫ್ ಕಾಲೇಜಿನ ನವೀಕೃತ ಕಟ್ಟಡವನ್ನು ಉದ್ಘಾಟಿಸಿದ ನಂತರ ರಾಜ್ಯಪಾಲರು ಸಭೆಯನ್ನುದ್ದೇಶಿಸಿ ಮಾತನಾಡಿದರು.

- Advertisement -

ಗುಣಮಟ್ಟದ ಶಿಕ್ಷಣ ಮತ್ತು ಒಳಗೊಳ್ಳುವಿಕೆಯ ಮಹತ್ವವನ್ನು ಒತ್ತಿ ಹೇಳಿದ ರಾಜ್ಯಪಾಲರು, ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಯಲ್ಲಿ ಶಿಕ್ಷಣವು ಮಹತ್ವದ ಪಾತ್ರ ವಹಿಸುತ್ತದೆ. ಶಿಕ್ಷಣದಿಂದ ನೈತಿಕತೆ ಮೂಡಬೇಕು ಎಂದರು.

ಸ್ವಾಮಿ ವಿವೇಕಾನಂದರ ಪ್ರಕಾರ, ಶಿಕ್ಷಣವು ವ್ಯಕ್ತಿತ್ವ, ಮಾನಸಿಕ ಬೆಳವಣಿಗೆ ಮತ್ತು ಬುದ್ಧಿವಂತಿಕೆಯನ್ನು ನಿರ್ಮಿಸುತ್ತದೆ. ಅದೇ ಚಿಂತನೆಯನ್ನು ಇಟ್ಟುಕೊಂಡು, ಸೇಂಟ್ ಜೋಸೆಫ್ ಸಂಸ್ಥೆಗಳು ಶಿಕ್ಷಣವನ್ನು ಕೌಶಲ್ಯ ಮತ್ತು ನೈತಿಕ ಮೌಲ್ಯಗಳೊಂದಿಗೆ ಜೋಡಿಸುವ ಮೂಲಕ ನವ ಭಾರತ, ಶ್ರೇಷ್ಠ ಭಾರತವನ್ನು ನಿರ್ಮಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿವೆ ಎಂದು ರಾಜ್ಯಪಾಲರು ಹೇಳಿದರು.



Join Whatsapp