Home ಟಾಪ್ ಸುದ್ದಿಗಳು BJPಯಲ್ಲಿ ಮುಸ್ಲಿಮರಿಗೆ ಅವಕಾಶ ಕಲ್ಪಿಸುವ ಅಗತ್ಯವಿದೆ: ಭಾಸ್ಕರ್ ರಾವ್

BJPಯಲ್ಲಿ ಮುಸ್ಲಿಮರಿಗೆ ಅವಕಾಶ ಕಲ್ಪಿಸುವ ಅಗತ್ಯವಿದೆ: ಭಾಸ್ಕರ್ ರಾವ್

‘ವಸುದೈವ ಕುಟುಂಬಕಂ ಬಿಜೆಪಿ ಮಂತ್ರವಾಗಬೇಕು’


ಬೆಂಗಳೂರು: ಬಿಜೆಪಿಯಲ್ಲಿ ಮುಸ್ಲಿಮರಿಗೆ ಅವಕಾಶ ಕಲ್ಪಿಸುವ ಅಗತ್ಯವಿದೆ. ‘ವಸುದೈವ ಕುಟುಂಬಕಂ ಬಿಜೆಪಿ ಮಂತ್ರವಾಗಬೇಕು’ ಎಂದು ಬಿಜೆಪಿ ನಾಯಕ ಭಾಸ್ಕರ್ ರಾವ್ ಹೇಳಿದ್ದಾರೆ.

2024 ರ ಲೋಕಸಭಾ ಚುನಾವಣೆಯು ಸಮೀಪಿಸುತ್ತಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಹಲವು ಸಭೆಗಳನ್ನು ನಡೆಸುತ್ತಿದೆ. ಇತ್ತೀಚೆಗೆ ನಡೆದ ಬಿಜೆಪಿ ಸಭೆಯಲ್ಲಿ ಪಕ್ಷದ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಭಾಗವಹಿಸಿದ್ದರು. ಈ ವೇಳೆ ಮಾಜಿ ಪೊಲೀಸ್ ಅಧಿಕಾರಿ ಮತ್ತು ಬಿಜೆಪಿ ನಾಯಕ ಭಾಸ್ಕರ್ ರಾವ್ ಅವರು ಪಕ್ಷವು ಮುಸ್ಲಿಮರನ್ನು ಜೊತೆಗೆ ಕರೆದೊಯ್ಯಬೇಕು ಎಂದು ಅಭಿಪ್ರಾಯ ಪಟ್ಟಿದ್ದಾರೆ.


ಸರ್ವಜ್ಞನಗರ, ಪುಲಕೇಶಿನಗರ, ಶಿವಾಜಿನಗರ, ಬಿಟಿಎಂ ಲೇಔಟ್, ಶಾಂತಿನಗರ ಮತ್ತು ಗಾಂಧಿನಗರದಂತಹ ಕಾಂಗ್ರೆಸ್ ಮತ್ತು ಜೆಡಿಎಸ್ ಭದ್ರಕೋಟೆಗಳನ್ನು ಕಿತ್ತೊಗೆಯಲು ವಿಶೇಷ ಕಾರ್ಯನಿರ್ವಹಣೆಯೊಂದಿಗೆ ಪಕ್ಷಕ್ಕೆ ವಿಶೇಷ ಪ್ರಧಾನ ಕಾರ್ಯದರ್ಶಿ ಮಟ್ಟದ ಪದಾಧಿಕಾರಿ ಇರಬೇಕು ಎಂದು ರಾವ್ ಸಲಹೆ ನೀಡಿದರು. ಈ ಎಲ್ಲ ಕ್ಷೇತ್ರಗಳಲ್ಲಿ ಬಿಜೆಪಿ ಕಾರ್ಯರ್ತರು ಇದ್ದರೂ, ಪಕ್ಷದ ಮತಗಳಿಕೆಯನ್ನು ಹೆಚ್ಚಿಸಲು ಪರಿಣಾಮಕಾರಿಯಾಗಿ ಕೆಲಸ ಮಾಡಬೇಕಿದೆ ಎಂದರು.

Join Whatsapp
Exit mobile version