ನನ್ನ ಕುಟುಂಬದ ವಿರುದ್ಧ ವ್ಯವಸ್ಥಿತವಾಗಿ ಷಡ್ಯಂತ್ರ ನಡೆಯುತ್ತಿದೆ: ಹೆಚ್‌ಡಿ ರೇವಣ್ಣ

Prasthutha|

ಬೆಂಗಳೂರು: ಪುತ್ರ ಸೂರಜ್‌ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಮಾಜಿ ಸಚಿವ ಹೆಚ್.ಡಿ. ರೇವಣ್ಣ, ನನ್ನ ಕುಟುಂಬದ ವಿರುದ್ಧ ವ್ಯವಸ್ಥಿತವಾಗಿ ಷಡ್ಯಂತ್ರ ನಡೆಯುತ್ತಿದೆ ಎಂದು ಹೇಳಿದ್ದಾರೆ.

- Advertisement -

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಕುಟುಂಬದ ವಿರುದ್ಧ ವ್ಯವಸ್ಥಿತವಾಗಿ ಷಡ್ಯಂತ್ರ ಮಾಡಲಾಗಿದೆ. ನಾನು ಈ ರೀತಿಯ ಷಡ್ಯಂತ್ರಕ್ಕೆ ಹೆದರುವುದಿಲ್ಲ. ನಾನು, ದೇವರು, ನ್ಯಾಯಾಂಗದ ಮೇಲೆ ನಂಬಿಕೆ ಇಟ್ಟುಕೊಂಡಿದ್ದೇನೆ ಎಂದು ಹೇಳಿದ್ದಾರೆ.

ಪ್ರಕರಣವನ್ನು ಸಿಐಡಿ ತನಿಖೆಗೆ

- Advertisement -

ಸೂರಜ್‌ ರೇವಣ್ಣರನ್ನು ಇಂದು ಬೆಳಗ್ಗೆ ಹಾಸನದ ಸೆನ್‌ ಪೊಲೀಸ್‌ ಠಾಣೆಯ ಪೊಲೀಸರು ಬಂಧಿಸಿದ್ದು, ಹಾಸನದ ಹಿಮ್ಸ್‌ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ಮಾಡಲಾಗಿದೆ. ಸೂರಜ್‌ ರೇವಣ್ಣ ವಿರುದ್ಧದ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣವನ್ನು ಸಿಐಡಿ ತನಿಖೆಗೆ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

Join Whatsapp