ರಾಜ್ಯದಲ್ಲಿರುವುದು ಕಾಂಗ್ರೆಸ್​ ಸರ್ಕಾರವಲ್ಲ, ತಾಲಿಬಾನ್ ಸರ್ಕಾರ: ಶಾಸಕ ಯತ್ನಾಳ್

Prasthutha|

ವಿಜಯಪುರ: ರಾತ್ರಿ ವೇಳೆ ಹಿಂದೂಗಳು ಸುತ್ತಾಡದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಸರ್ಕಾರವಿಲ್ಲ, ತಾಲಿಬಾನ್ ಸರ್ಕಾರವಿದೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಾಗ್ದಾಳಿ ಮಾಡಿದ್ದಾರೆ.

- Advertisement -

ನಗರದ ಸಿದ್ದೇಶ್ವರ ದೇವಸ್ಥಾನದ ಆವರಣದಲ್ಲಿ ನಡೆದ ಸಾರ್ವಜನಿಕ ಗಣೇಶನ ಪ್ರತಿಷ್ಠಾಪಿಸುವ ಮಂಡಳಿಗಳ ಸಭೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಹಿಂದೂಗಳ ಮೇಲೆ ದಾಳಿಯಾಗುತ್ತಿದೆ. ಮೈಸೂರಿನಲ್ಲಿ ಕೊಲೆಯಾಯಿತು, ಶಿವಮೊಗ್ಗದಲ್ಲಿ ಗಲಾಟೆಯಾಯಿತು ಎಂದು ಹೇಳಿದ್ದಾರೆ.

ಗಣೇಶ ಹಬ್ಬಕ್ಕೆ ಅನುಮತಿ ಪಡೆಯಬೇಕು ಎಂದು ಸರ್ಕಾರ ಹೇಳುತ್ತಿದೆ. ಕಾಂಗ್ರೆಸ್ ಆಡಳಿತದಲ್ಲಿರುವುದರಿಂದ ನಮ್ಮ ಸಭೆಗೆ ಪೊಲೀಸರು ಬಂದಿದ್ದಾರೆ. ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕಿದ್ದು ಗಣೇಶೋತ್ಸವದಿಂದ ಅನ್ನೋದನ್ನು ಅವರು ಮರೆಯಬಾರದು. ಗಣೇಶ ಹಬ್ಬ ಜನರನ್ನು ಒಂದುಗೂಡಿಸುವ ಕೆಲಸ ಮಾಡುತ್ತೆ ಎಂದಿದ್ದಾರೆ.