ನಮ್ಮಲ್ಲಿ ಯಾವುದೇ ಭಿನ್ನಮತ ಇಲ್ಲ ಎಂದ ಸತೀಶ್‌ ಜಾರಕಿಹೊಳಿ

Prasthutha|

ಬೆಳಗಾವಿ: ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ಅಂಥದ್ದು ಏನಾದರೂ ಇದ್ದರೆ ಹೈಕಮಾಂಡ್‌ ಗಮನಕ್ಕೆ ತರಲಾಗುವುದು ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್‌ ಜಾರಕಿಹೊಳಿ ಹೇಳಿದ್ದಾರೆ.

- Advertisement -

ನಗರದಲ್ಲಿ ಶನಿವಾರ ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ಎಲ್ಲರ ಒಗ್ಗಟ್ಟು ಮತ್ತು ಪರಿಶ್ರಮದಿಂದ ಕಾಂಗ್ರೆಸ್‌ ಅಧಿಕಾರಕ್ಕೆ ಬಂದಿದೆ. ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬರುವಲ್ಲಿ ಸಾವಿರಾರು ನಾಯಕರು, ಲಕ್ಷಾಂತರ ಕಾರ್ಯಕರ್ತರ ಪಾತ್ರವಿದೆ. ಎಲ್ಲರ ಸಹಕಾರದಿಂದಲೇ ಅಧಿಕಾರಕ್ಕೆ ಬಂದಿದ್ದೇವೆ ಎಂದರು. ಇನ್ನೊಂದು “ಪವರ್‌ ಸೆಂಟರ್‌’ ಮಾಡಬೇಕೆಂಬ ಉದ್ದೇಶ ನಮ್ಮದಲ್ಲ. ಸಮಾನ ಮನಸ್ಕರು ಪ್ರವಾಸಕ್ಕೆ ಹೋಗಬೇಕೆಂದು ಸಾಕಷ್ಟು ಮೊದಲೇ ತೀರ್ಮಾನಿಸಿದ್ದೆವು. ಆದರೆ ಎಲ್ಲ ಕಾಂಗ್ರೆಸಿಗರು ಒಟ್ಟಾಗಿಯೇ ಇದ್ದೇವೆ. ಮುಂದೆಯೂ ಇರುತ್ತೇವೆ ಎಂದು ಜಾರಕಿಹೊಳಿ ಸ್ಪಷ್ಟಪಡಿಸಿದರು. “ಮೌನವಾಗಿದ್ದರಿಂದ ಬೇರೆ ಸಂದೇಶ ರವಾನೆ ಆಯಿತಾ?”ಎಂಬ ಪ್ರಶ್ನೆಗೆ ಅವರು, “ಯಾವ ಸಂದೇಶವೂ ಇಲ್ಲ. ನಾವೆಲ್ಲ ಒಟ್ಟಾಗಿದ್ದೇವೆ. ಪಕ್ಷದಲ್ಲಿ ಯಾವುದೇ ಗೊಂದಲ ಇಲ್ಲ ಎಂದರು”.



Join Whatsapp